ಬರುವ ವಾರದಿಂದ ಜಿಲ್ಲಾವಾರು ಶಾಸಕರನ್ನು ಭೇಟಿ ಮಾಡಲಿರುವ ಸಿಎಂ ಬಿ ಎಸ್ ಯಡಿಯೂರಪ್ಪ

ಬೆಂಗಳೂರು:ಸರ್ಕಾರದಲ್ಲಿ ತಮಗೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ ಮತ್ತು ಸರಿಯಾದ ಹಣಕಾಸು ಅನುದಾನ ಸಿಗುತ್ತಿಲ್ಲ ಎಂದು ಕೆಲವು ಶಾಸಕರು ತಮ್ಮ ಅಸಮಾಧಾನ ತೋಡಿಕೊಂಡ ನಂತರ ಬಿಜೆಪಿ ಕೋರ್ ಕಮಿಟಿಯಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಮುಂದಿನ ವಾರದಿಂದ ಜಿಲ್ಲಾವಾರು ಶಾಸಕರ ಸಭೆ ನಡೆಸಬೇಕೆಂದು ನಿರ್ಧರಿಸಲಾಯಿತು.ಶಾಸಕಾಂಗ ಪಕ್ಷ ಸಭೆಯಲ್ಲಿ ಬಂದಿರುವ ಸಲಹೆ ಪ್ರಕಾರ ಮುಖ್ಯಮಂತ್ರಿಗಳು ಶಾಸಕರ ಸಭೆಗಳನ್ನು ನಡೆಸಬೇಕು, ಶಾಸಕರು ಮತ್ತು ಪರಿಷತ್ ಸದಸ್ಯರು ತಮ್ಮ ಜಿಲ್ಲೆಗಳ ಅಭಿವೃದ್ಧಿ ಕೆಲಸಗಳನ್ನು ಮುಖ್ಯಮಂತ್ರಿಗಳ ಜೊತೆ ಚರ್ಚಿಸಬೇಕು ಎಂದು ನಿರ್ಧರಿಸಲಾಯಿತು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸುದ್ದಿಗಾರರಿಗೆ ನಿನ್ನೆ ಬೆಂಗಳೂರಿಗೆ ತಿಳಿಸಿದರು.ನಿನ್ನೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಹಿರಿಯ ನಾಯಕರು ಹಾಜರಿದ್ದರು.

 

Share Post

Leave a Reply

Your email address will not be published. Required fields are marked *

error: Content is protected !!