ಮಾರ್ಚ್ 31ರ ತನಕ ಹೊರ ರಾಜ್ಯಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ರದ್ದು

ಬೆಂಗಳೂರು, ಮಾರ್ಚ್ 22 : ಕೊರೊನಾ ಹರಡದಂತೆ ತಡೆಯಲು ಕೆಎಸ್‌ಆರ್‌ಟಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಮಾರ್ಚ್ 31ರ ತನಕ ಹೊರ ರಾಜ್ಯಗಳಿಗೆ ಬಸ್ ಸಂಚಾರವನ್ನು ರದ್ದುಗೊಳಿಸಿದೆ.

ಭಾನುವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಈ ಕುರಿತು ಪ್ರಕಟಣೆ ಹೊರಡಿಸಿದೆ. ಮಾರ್ಚ್ 31ರ ತನಕ ಹೊರರಾಜ್ಯದ ಎಲ್ಲಾ ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಮನವಿಯಂತೆ ಭಾನುವಾರ ‘ಜನತಾ ಕರ್ಫ್ಯೂ’ವನ್ನು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯ ತನಕ ನಡೆಸಲಾಗುತ್ತಿದೆ. ಆದ್ದರಿಂದ ರಾಜ್ಯದಲ್ಲಿ ಸರ್ಕಾರಿ ಬಸ್ ಸೇವೆ ಸ್ಥಗಿತಗೊಂಡಿದೆ.

ಕೇಂದ್ರ ಸರ್ಕಾರದ ಸೂಚನೆಯಂತೆ ದೆಹಲಿ, ಬೆಂಗಳೂರು, ಜೈಪುರ, ಹೈದರಾಬಾದ್, ಚೆನ್ನೈ ಸೇರಿದಂತೆ ದೇಶದ 6 ಮಹಾನಗರಗಳಲ್ಲಿ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಈಗ ಹೊರ ರಾಜ್ಯದ ಬಸ್ ಸೇವೆಯನ್ನು ಕೆಎಸ್‌ಆರ್‌ಟಿಸಿ ಸ್ಥಗಿತಗೊಂಡಿದೆ.

ಕರ್ನಾಟಕದ ಅಕ್ಕ-ಪಕ್ಕದ ರಾಜ್ಯಗಳು ಈಗಾಗಲೇ ಅಗತ್ಯ ವಸ್ತು ಹೊರತುಪಡಿಸಿ ಉಳಿದ ವಾಹನಗಳ ಸಂಚಾರವನ್ನು ರದ್ದುಗೊಳಿಸಿದೆ. ಆದ್ದರಿಂದ, ಕೆಎಸ್‌ಆರ್‌ಟಿಸಿ ಹೊರರಾಜ್ಯಗಳಿಗೆ ಬಸ್ ಸೇವೆ ಸ್ಥಗಿತಗೊಳಿಸುವ ತೀರ್ಮಾನ ಕೈಗೊಂಡಿದೆ.

ವೇಗದೂತ ಮತ್ತು ರಾಜಹಂಸ ಬಸ್‌ಗಳಲ್ಲಿ ಮುಂಗಡ ಟಿಕೆಟ್ ಇಲ್ಲದೆ ಪ್ರಯಾಣಿಸುವವರ ಹೆಸರು ಮತ್ತು ದೂರವಾಣಿ ಸಂಖ್ಯೆಯನ್ನು ಪಡೆಯಲಾಗುತ್ತಿದೆ. ಕೊರೊನಾ ಸೋಂಕಿತರು ಬಸ್‌ನಲ್ಲಿ ಪ್ರಯಾಣಿಸಿದರೆ ಬಸ್‌ನಲ್ಲಿ ಸಂಚಾರ ನಡೆಸಿದರವನ್ನು ಪತ್ತೆ ಹಚ್ಚಲು ಈ ಕ್ರಮ ಕೈಗೊಳ್ಳಲಾಗಿದೆ.

 

Share Post

Leave a Reply

Your email address will not be published. Required fields are marked *

error: Content is protected !!