ATM ಬಳಸುವ ಗ್ರಾಹಕರಿಗೆ ಶಾಕಿಂಗ್ ನ್ಯೂಸ್..!

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಎಟಿಎಂಗಳಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಕನಿಷ್ಠ ಸ್ಯಾನಿಟೈಸರ್ ವ್ಯವಸ್ಥೆ ಕೂಡ ಮಾಡಿಲ್ಲದ ಕಾರಣ ಸೋಂಕು ಹರಡುವ ಸಾಧ್ಯತೆ ಇದೆ.

ವೈರಸ್ ಹರಡುವ ಕಾರಣ ಹಲವು ಕಚೇರಿ, ಕಂಪನಿಗಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕೈಬಿಡಲಾಗಿದೆ. ಆದರೆ ಎಟಿಎಂಗಳಲ್ಲಿ ಜನ ಸುರಕ್ಷತೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸೋಂಕಿತ ವ್ಯಕ್ತಿ ಎಟಿಎಂನಲ್ಲಿ ಹಣ ಪಡೆದುಕೊಂಡು ಹೋದರೆ ಅಪಾಯ ಗ್ಯಾರಂಟಿ. ಎಟಿಎಂನಲ್ಲಿ ಹಣ ಪಡೆಯಲು ಕನಿಷ್ಠ 10 ಸಲ ಟಚ್ ಮಾಡಬೇಕಿದೆ. ಇದರಿಂದ ಸೋಂಕು ಹರಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎಟಿಎಂಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದ್ದರೂ ಯಾವುದೇ ಎಟಿಎಂಗಳಲ್ಲಿ ಕನಿಷ್ಠ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕೂಡ ಮಾಡಿಲ್ಲ. ಎಟಿಎಂಗಳಲ್ಲಿ ವೈರಸ್ ಹರಡುವ ಭೀತಿ ಎದುರಾಗಿದೆ ಎಂದು ಹೇಳಲಾಗಿದೆ.

Share Post

Leave a Reply

Your email address will not be published. Required fields are marked *

error: Content is protected !!