ಸಾಲದ ಮೇಲಿನ ಬಡ್ಡಿ ಮನ್ನಾ, ಎಲ್ಲಾ EMI 6 ತಿಂಗಳು ಮುಂದೂಡಲು ಮನವಿ- ಸೋನಿಯಾ ಗಾಂಧಿ

ನವದೆಹಲಿ: ಎಲ್ಲ ಇಎಂಐಗಳನ್ನು ಆರು ತಿಂಗಳು ಮುಂದೂಡಬೇಕೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಬೆಂಬಲ ನೀಡಲಿದೆ. 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ.

ಅದೇ ರೀತಿ ಎಲ್ಲಾ ಇಎಂಐಗಳನ್ನು ಆರು ತಿಂಗಳು ಮುಂದೂಡಲು ಕ್ರಮಕೈಗೊಳ್ಳಬೇಕೆಂದು ಪ್ರಧಾನಿಯವರಿಗೆ ಸೋನಿಯಾ ಗಾಂಧಿ ಪತ್ರ ಬರೆದು ಮನವಿ ಮಾಡಿದ್ದಾರೆ. ಇದರೊಂದಿಗೆ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವಂತೆಯೂ ಕೋರಿದ್ದು, ಕೊರೋನಾಗೆ ಸಂಬಂಧಿತ ಸರ್ಕಾರದ ಎಲ್ಲಾ ನಿರ್ಧಾರಕ್ಕೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.

 

Share Post

Leave a Reply

Your email address will not be published. Required fields are marked *

error: Content is protected !!