ದೇಶದಲ್ಲಿ ಕೊವಿಡ್-19 ಗೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆ, ಸೋಂಕಿತರ ಸಂಖ್ಯೆ 724ಕ್ಕೇರಿದೆ

ಭಾರತದಲ್ಲಿ ಕೊರೊನಾ ವೈರಸ್‌ಗೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಸಂಖ್ಯೆ 724ಕ್ಕೇರಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ರಾಜಸ್ಥಾನದ ಭಿಲ್ವಾರಾದಲ್ಲಿ ಎರಡನೇ ಸಾವು ಸಂಭವಿಸಿದೆ. 60 ವರ್ಷದ ವೃದ್ಧೆ ಮೃತಪಟ್ಟಿದ್ದು ಅವರಿಗೆ ರಕ್ತದೊತ್ತಡ ಹಾಗೂ ಕಿಡ್ನಿಗೆ ಸಂಬಂಧಿಸಿದ ಸಮಸ್ಯೆ ಇತ್ತು ಎಂದು ತಿಳಿದುಬಂದಿದೆ.

ಇದಕ್ಕೂ ಮುನ್ನ ಭಿಲ್ವಾರಾದಲ್ಲಿ 73 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದರು. ಅವರಿಗೂ ಕಿಡ್ನಿ ವೈಫಲ್ಯ ಹಾಗೂ ಮಧುಮೇಹದ ತೊಂದರೆ ಇತ್ತು. ಬಳಿಕ ಅವರಿಗೆ ಮೆದುಳು ಪಾರ್ಶ್ವವಾಯುವಿಗೆ ತುತ್ತಾಗಿ ಕೋಮಾಗೆ ಹೋಗಿದ್ದರು ಬಳಿಕ ಸಾವನ್ನಪ್ಪಿದ್ದರು.

ಪಿಂಪ್ರಿ ಚಿಂಚವಾಡದಲ್ಲಿ ಕಳೆದ 15 ದಿನಗಳ ಹಿಂದೆ ಮೂರು ಮಂದಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿತ್ತು. ಆದರೆ ಈಗ ಬಂದಿರುವ ಮಾಹಿತಿ ಪ್ರಕಾರ ಮೂರು ಮಂದಿಯ ರಿಪೋರ್ಟ್ ನೆಗೆಟಿವ್ ಬಂದಿದೆ. ಮೂರು ಮಂದಿಯನ್ನೂ ಇಂದೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರದಲ್ಲಿ ಒಂದೇ ದಿನ 112 ಕೊರೊನಾ ಪ್ರಕರಣಗಳು ಕಂಡುಬಂದಿದ್ದು ಒಟ್ಟಾರೆ ಇದುವರೆಗೆ 734 ಕೊರೊನಾ ವೈರಸ್‌ ಪ್ರಕರಣಗಳು ದೃಢ ಪಟ್ಟಿವೆ.

ಈ ಪೈಕಿ ಒಟ್ಟು 17 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 55 ಕೋವಿಡ್‌-19 ಪ್ರಕರಣಗಳು ದೃಢ ಪಟ್ಟಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ವಿಶ್ವಾದ್ಯಂತ ಇದುವರೆಗೆ 5,20,000 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ 23,000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 1,22,000 ರೋಗಿಗಳು ಗುಣಮುಖರಾಗಿದ್ದಾರೆ.

 

Share Post

Leave a Reply

Your email address will not be published. Required fields are marked *

error: Content is protected !!