Sunday, September 27, 2020
Home ಬೆಂಗಳೂರು ಕೋವಿಡ್-19 ಮಾಹಿತಿಗಾಗಿ ವೆಬ್ಸೈಟ್ ಹಾಗೂ ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಶುಲ್ಕ-ರಹಿತ ದೂರವಾಣಿ ಲೋಕಾರ್ಪಣೆ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಕೋವಿಡ್-19 ಮಾಹಿತಿಗಾಗಿ ವೆಬ್ಸೈಟ್ ಹಾಗೂ ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಶುಲ್ಕ-ರಹಿತ ದೂರವಾಣಿ ಲೋಕಾರ್ಪಣೆ

ಬೆಂಗಳೂರು:ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ, ಕರ್ನಾಟಕದಲ್ಲಿ ಕೊರೊನಾ ವೈರಾಣು 19 ( ಕೋವಿಡ್-19 ) ಕುರಿತ ಅಧಿಕೃತ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ  ರೂಪಿಸಿರುವ ವೆಬ್‍ಸೈಟ್ ಹಾಗೂ ಅನ್ನವಿಲ್ಲದ ಬಡ ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಕಾರ್ಮಿಕ ಇಲಾಖೆ ಸ್ಥಾಪಿಸಿರುವ ಶುಲ್ಕ-ರಹಿತ ದೂರವಾಣಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಅವರು ನಗರದ ವಾರ್ತಾ ಸೌಧದ ಮಹಾತ್ಮ ಗಾಂಧಿ ಮಾಧ್ಯಮ ಕೇಂದ್ರದಲ್ಲಿ ಶನಿವಾರ ಲೋಕಾರ್ಪಣೆ ಮಾಡಿದರು.

ಇಡೀ ವಿಶ್ವವನ್ನೇ ಕಾಡುತ್ತಿರುವ ಕೋವಿಡ್-19 ರ ಉಪಟಳ ಅತೀ ಶೀಘ್ರದಲ್ಲೇ ಅಂತ್ಯಗೊಳ್ಳಲಿ. ಮುಂದೆಂದೂ ಮನುಕುಲಕ್ಕೆ ಇಂತಹ ಸಮಸ್ಯೆಗಳು ಕಾಡದಿರಲಿ ಎಂಬ ಶುಭ ಹಾರೈಕೆಯೊಂದಿಗೆ ಈ ವಿಶೇಷ ಸಂದರ್ಭಕ್ಕೆಂದೇ ರೂಪಿಸಿರುವ ಕೋವಿಡ್-19 ರ ಅಧಿಕೃತ ವೆಬ್‍ಸೈಟ್ :   https://covid19.karnataka.gov.in/wordpress/     ಗೆ ಸಚಿವರು ಚಾಲನೆ ನೀಡಿದರು.

ಅಲ್ಲದೆ, ಇದೇ ಸಂದರ್ಭದಲ್ಲಿ ಬಡ ಕೂಲಿ ಕಾರ್ಮಿಕರು ಹಾಗೂ ವಲಸೆ ಬಂದಿರುವ ಕಾರ್ಮಿಕರ ಹಸಿವನ್ನು ನೀಗಿಸಲು ಕಾರ್ಮಿಕ ಇಲಾಖೆಯ ಸಹಾಯವಾಣಿ : 155214 ಕರೆ ಮಾಡುವ ಮೂಲಕ ಸಚಿವರು ಲೋಕಾರ್ಪಣೆ ಮಾಡಿದರು.

ವೆಬ್‍ಸೈಟ್ ವೈಶಿಷ್ಠ್ಯ !

ಮುಖ್ಯಮಂತ್ರಿಯವರ ಸಂದೇಶ, ಸಹಾಯವಾಣಿ ಮಾಹಿತಿ,  ನಾವು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಕೋವಿಡ್-19 ರ ಗುಣ-ಲಕ್ಷಣಗಳು, 21 ದಿನಗಳ ಲಾಕ್‍ಡೌನ್ ವಿವರ, ಸ್ವಯಂಸೇವಕರಾಗಿ ಸೇರಬಯಸುವವರಿಗೆ ಅವಕಾಶ ಹಾಗೂ ಸಾಮಾನ್ಯವಾಗಿ ಕೇಳುವ ಪ್ರಶ್ನೆಗಳಿಗೆ ಉತ್ತರಗಳು,  ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಬಲಿಯಾದವರ ಸಂಖ್ಯೆ  ಒಳಗೊಂಡಂತೆ ಕೋವಿಡ್-19 ದೃಢಪಟ್ಟಿರುವವರ ಅಂಕಿ-ಸಂಖ್ಯೆ  ಕುರಿತ ತಾಜಾ ಮಾಹಿತಿ ಈ ವೆಬ್‍ಸೈಟ್‍ನಲ್ಲಿ ಲಭ್ಯವಿದೆ.

ಸಹಾಯವಾಣಿಯ ವಿಶೇಷ

ಅನ್ನವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಕೂಲಿಕಾರರು ಸಹಾಯವಾಣಿಗೆ ಕರೆ ಮಾಡಿದಲ್ಲಿ ಅವರು ಎಲ್ಲಿಂದ ಕರೆ ಮಾಡಿದ್ದಾರೆ ? ಎಂಬುದನ್ನು ದೃಢಪಡಿಸಿಕೊಂಡು ಸಮೀಪದ ಇಂದಿರಾ ಕ್ಯಾಂಟೀನ್ ಅಥವಾ ಸರ್ಕಾರೇತರ ಸಂಘ-ಸಂಸ್ಥೆಗಳ ನೆರವಿನಿಂದ ಅವರು ಇದ್ದಲ್ಲೇ ಊಟದ ವ್ಯವಸ್ಥೆ ಮಾಡಲು ಸಹಾಯವಾಣಿ ನೆರವು ಒದಗಿಸಲಿದೆ.  ಅಲ್ಲದೆ, ಬೇರೆ ಊರುಗಳಿಂದ ಬಂದು ನೆಲ ಇಲ್ಲದ ಜನರಿಗೆ ನೆಲೆ ಒದಗಿಸುವ ಪ್ರಯತ್ನವನ್ನೂ ಸಹಾಯವಾಣಿ ಮಾಡಲಿದೆ. ಜೊತೆಗೆ, ಸಾವು ಇನ್ನಿತರ ಸಂದರ್ಭದಲ್ಲಿ ತಮ್ಮ ಊರಿಗೆ ತೆರಳಬೇಕಾದ ಸಂಕಷ್ಟ ಎದುರಿಸುತ್ತಿರುವ ಕೂಲಿ ಕಾರ್ಮಿಕರಿಗೂ ಸಹಾಯವಾಣಿ ಸಹಾಯಕ್ಕೆ ಬರಲಿದೆ ಎಂದು ಸಚಿವರು ತಿಳಿಸಿದರು.

ಕೋವಿಡ್-19 ಮಾಹಿತಿಗಾಗಿ ವೆಬ್ಸೈಟ್ ಹಾಗೂ ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಶುಲ್ಕ-ರಹಿತ ದೂರವಾಣಿ ಲೋಕಾರ್ಪಣೆಮುಖ್ಯಮಂತ್ರಿಯವರ ಇ-ಗವರ್ನೆನ್ಸ್ ಸಲಹೆಗಾರ ಬೇಳೂರು ಸುದರ್ಶನ, ಕಾರ್ಮಿಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಅವರೂ ಈ ಸಂದರ್ಭದಲ್ಲಿ ಹಾಜರಿದ್ದರು.

TRENDING