ಭಾರತದಲ್ಲಿ ಸಾವಿನ ಸಂಖ್ಯೆ 25ಕ್ಕೇರಿದ್ದು 1000 ಸನಿಹದಲ್ಲಿ ಸೋಂಕಿತರ ಸಂಖ್ಯೆ..!

ಬೆಂಗಳೂರುಭಾರತದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಬಾರಿಸಿದ್ದು ಕರ್ನಾಟಕದ ಮೂವರು ಸೇರಿದಂತೆ ಭಾರತದಲ್ಲಿ ಸಾವಿನ ಸಂಖ್ಯೆ 25ಕ್ಕೇರಿದ್ದು 1000 ಸನಿಹದಲ್ಲಿ ಸೊಂಕಿತರ ಸಂಖ್ಯೆ.

ಕೇಂದ್ರ ಆರೋಗ್ಯ ಸಚಿವಾಲಯ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು ದೆಹಲಿ, ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದು ದೇಶದಲ್ಲಿ ಸಾವಿನ ಸಂಖ್ಯೆ 25ಕ್ಕೇರಿದೆ.

48 ವಿದೇಶಿಯರು ಸೇರಿದಂತೆ ಭಾರತದಲ್ಲಿ ಪ್ರಸ್ತುತ 987 ಮಂದಿಗೆ ಸೋಂಕು ತಗುಲಿದ್ದು ಅವರನ್ನು ಐಸೋಲೇಷನ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಮಹಾರಾಷ್ಟ್ರದಲ್ಲಿ 186 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದರೆ ಕೇರಳದಲ್ಲಿ 182 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ(6), ಗುಜರಾತ್(4), ಕರ್ನಾಟಕ(3), ಮಧ್ಯಪ್ರದೇಶ(2), ದೆಹಲಿ(2) ಸೇರಿದಂತೆ ಕೇರಳ, ತೆಲಂಗಾಣ, ತಮಿಳುನಾಡು, ಬಿಹಾರ್, ಪಂಜಾಬ್, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

 

Share Post

Leave a Reply

Your email address will not be published. Required fields are marked *

error: Content is protected !!