Sunday, September 27, 2020
Home ಅಂತರ್ ರಾಷ್ಟ್ರೀಯ ಕೋವಿಡ್‌-19 ಅಮೆರಿಕದ 2 ಲಕ್ಷದಷ್ಟು ಜನರು ಸಾವಿಗೀಡಾಗುವ ಸಾಧ್ಯತೆ : ವಿಜ್ಞಾನಿ ಡಾ.ಫೌಸಿ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಕೋವಿಡ್‌-19 ಅಮೆರಿಕದ 2 ಲಕ್ಷದಷ್ಟು ಜನರು ಸಾವಿಗೀಡಾಗುವ ಸಾಧ್ಯತೆ : ವಿಜ್ಞಾನಿ ಡಾ.ಫೌಸಿ

ವಾಷಿಂಗ್ಟನ್‌: ಅಮೆರಿಕದ ಹಿರಿಯ ವಿಜ್ಞಾನಿ ಕೊರೊನಾ ವೈರಸ್‌ ಸೋಂಕಿನಿಂದ ಮುಂದಾಗಲಿರುವ ಅಪಾಯದ ಮುನ್ನೆಚ್ಚರಿಕೆ ನೀಡಿದ್ದಾರೆ. ಅಮೆರಿಕದಲ್ಲಿ ಕೋವಿಡ್‌-19 ಸುಮಾರು 1,00,000ದಿಂದ 2,00,000 ಜನರನ್ನು ಬಲಿ ತೆಗೆದುಕೊಳ್ಳಬಹುದು ಎಂದು ಮಾರ್ಚ್‌ 29ರಂದು ಎಚ್ಚರಿಕೆ ರವಾನಿಸಿದ್ದಾರೆ.

ಕೊರೊನಾ ವೈರಸ್‌ ತಡೆಗಟ್ಟುವ ನಿಟ್ಟಿನಲ್ಲಿ ರಚಿಸಲಾಗಿರುವ ಕಾರ್ಯಪಡೆಯಲ್ಲಿರುವ ಡಾ.ಆಂಥೊನಿ ಫೌಸಿ ಅಂದಾಜು ಲೆಕ್ಕಾಚಾರ ಮುಂದಿಟ್ಟಿದ್ದಾರೆ. ಲಕ್ಷಾಂತರ ಮಂದಿ ಸೋಂಕಿಗೆ ಒಳಗಾಗಲಿದ್ದು, ಅಂದಾಜು ಒಂದು ಲಕ್ಷದಿಂದ 2 ಲಕ್ಷದಷ್ಟು ಜನರು ಸಾವಿಗೀಡಾಗುವ ಸಾಧ್ಯತೆ ಇರುವುದಾಗಿ ಅಭಿಪ್ರಾಯ ಪಟ್ಟಿದ್ದಾರೆ.

‘ಈ ಸಂಖ್ಯೆಗಳ ಲೆಕ್ಕದಲ್ಲಿ ಸಿಲುಕಲು ಬಯಸುವುದಿಲ್ಲ…ಇದು ಯಾವಾಗ ಬೇಕಾದರೂ ಸುಳ್ಳಾಗಬಹುದು ಹಾಗೂ ಇದರಿಂದ ಜನರ ಹಾದಿ ತಪ್ಪಿಸಿದಂತಾಗುತ್ತದೆ’ ಎಂದೂ ಹೇಳಿದ್ದಾರೆ.

ಕೋವಿಡ್‌-19 ಲಕ್ಷಣಗಳು ಕಂಡು ಬಂದವರನ್ನು ಪರೀಕ್ಷೆಗೆ ಒಳಪಡಿಸುವ ಸಂಖ್ಯೆ ಕಡಿಮೆ ಇರುವ ಕುರಿತು ಕೇಳಲಾದ ಪ್ರಶ್ನೆಗೆ, ‘ಕೆಲವು ವಾರಗಳ ಹಿಂದಿನ ಪರಿಸ್ಥಿತಿಯೊಂದಿಗೆ ಇಂದಿನದನ್ನು ಹೋಲಿಸಿ ನೋಡಿದರೆ, ನಾವೀಗ ಯಾವ ಸ್ಥಿತಿಯಲ್ಲಿದ್ದೇವೆ ಎಂಬುದು ತಿಳಿಯುತ್ತದೆ. ಹಿಂದಿಗಿಂತಗೂ ಅತಿ ಹೆಚ್ಚು ಪರೀಕ್ಷೆಗಳನ್ನು ನಾವು ನಡೆಸಿದ್ದೇವೆ. ಸಂಚಾರ ಹಾಗೂ ಕಾರ್ಯಾಚರಣೆಗಳ ಮೇಲಿನ ನಿರ್ಬಂಧ ತೆರವು ಶೀಘ್ರವೇ ಆಗುವುದೆಂದು ಹೇಳಲಾಗದು. ವಾರಕ್ಕಿಂತೂ ಹೆಚ್ಚು ಸಮಯ ಬೇಕಾಗಬಹದು… ‘ ಎಂದಿದ್ದಾರೆ.

ಭಾನುವಾರದ ವರೆಗೂ ಅಮೆರಿಕದಲ್ಲಿ 1,39,675 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ದಾಖಲಾಗಿವೆ ಹಾಗೂ ಸೋಂಕಿನಿಂದಾಗಿ ಸಾವಿಗೀಡಾದವರ ಸಂಖ್ಯೆ 2,436ಕ್ಕೆ ಏರಿಕೆಯಾಗಿದೆ.

TRENDING