Thursday, August 13, 2020
Home ಜಿಲ್ಲೆ ಬಳ್ಳಾರಿ ಹೊಸಪೇಟೆಯಲ್ಲಿ ಒಂದೇ ಕುಟುಂಬದ ಹತ್ತು ಜನರಿಗೆ ಕೊರೊನಾ ಪತ್ತೆ.!

ಇದೀಗ ಬಂದ ಸುದ್ದಿ

ಕೊರೊನಾ ಸೋಂಕಿತನ ಶವವನ್ನು ಕಚ್ಚಿ ತಿಂದ ನಾಯಿಗಳು

ಇಲ್ಲಿಯ ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಬಳಿ ಇರುವ ನಿರಾಶ್ರಿತರ ಕೇಂದ್ರದಲ್ಲಿ ವ್ಯಕ್ತಿಯೊಬ್ಬನ ಮೃತದೇಹವನ್ನು ನಾಯಿಗಳು ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ನಡೆದಿದೆ.

ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್...

ಆಯೋಧ್ಯೆಯಲ್ಲಿ ಆ. 5ರಂದು ನಡೆದಿದ್ದ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದ 'ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ' ಮುಖ್ಯಸ್ಥ ಮಹಾಂತ...

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಸರ್ಕಾರಿ ಆಸ್ಪತ್ರೆಗೆ ನೀರಿನ ಫಿಲ್ಟರ್ ಕೊಡುಗೆ ಕೊಟ್ಟ...

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ರೀತಿಯ ಸವಲತ್ತುಗಳು ಸಿಗುವಹಾಗೆ ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

ಸುಶಾಂತ್ ಸಿಂಗ್ ಪ್ರಕರಣ : ಅತಿ ದೊಡ್ಡ...

ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ ಪೂತ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸುಶಾಂತ್ ಸಿಂಗ್ ರದ್ದು ಆತ್ಮಹತ್ಯೆ ಅಲ್ಲ, ಹತ್ಯೆ ಎಂಬ ವಾದ ಸೋಷಿಯಲ್ ಮೀಡಿಯಾದಲ್ಲಿ ಜೋರಾಗುತ್ತಿದೆ....

ಹೊಸಪೇಟೆಯಲ್ಲಿ ಒಂದೇ ಕುಟುಂಬದ ಹತ್ತು ಜನರಿಗೆ ಕೊರೊನಾ ಪತ್ತೆ.!

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದಲ್ಲಿ ಈಗಾಗಲೇ ಒಂದೇ ಕುಟುಂಬದ ಮೂವರಲ್ಲಿ ಪತ್ತೆಯಾಗಿದ್ದ ಕೋವಿಡ್-19 ವೈರಸ್ ಪಾಸಿಟಿವ್ ಇದೀಗ ಅದೇ ಕುಟುಂಬದ ಮತ್ತೆ ಏಳು ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದಾರೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಎಸ್.ಆರ್.ನಗರದಲ್ಲಿನ ಒಂದೇ ಕುಟುಂಬದ ಮೂವರಲ್ಲಿ ಮಾರ್ಚ್ 30 ರಂದು ಕೋವಿಡ್-19 ವೈರಸ್ ಇರುವುದು ದೃಢಪಟ್ಟಿತ್ತು‌. ನಂತರ ಏ.4 ರಂದು ಇದೇ ಕುಟುಂಬದೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯೊಬ್ಬರಿಗೂ ವೈರಾಣು ಪತ್ತೆಯಾಗಿತ್ತು. ಇವರ ಸಂಬಂಧಿಕರಾದ 8 ಜನರನ್ನು ಹೊಸಪೇಟೆ ನಗರದ ಖಾಸಗಿ ಹೊಟೇಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಈ ಎಂಟು ಜನರ ಪೈಕಿ ಏಳು ಜನರಿಗೆ ಸೋಂಕು ಪಾಸಿಟಿವ್ ಇರುವುದು ಪತ್ತೆಯಾಗಿದ್ದು, ರಾಜ್ಯ ಸರ್ಕಾರ ಪ್ರಕಟಿಸಿದ ಶುಕ್ರವಾರದ ಬೆಳಗಿನ ಹೆಲ್ತ್ ಬುಲೆಟಿನ್ ಅಧಿಕೃತ ಪಡಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 13ಕ್ಕೆ ಏರಿಕೆಯಾದಂತಾಗಿದ್ದು,ಹೊಸಪೇಟೆ ನಗರದಲ್ಲೇ 11 ಜನರಿಗೆ ಕೋವಿಡ್-19 ಸೋಂಕು ತಗುಲಿದಂತಾಗಲಿದೆ.

ಹೊಸಪೇಟೆ ಎಸ್.ಆರ್.ನಗರದ ಒಂದೇ ಕುಟುಂಬದ ನಾಲ್ವರಿಗೆ ಈ ಸೋಂಕು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಅದೇ ಕುಟುಂಬದ ಪ್ರಾಥಮಿಕ ಕಾಂಟ್ಯಾಕ್ಟ್ ಹೊಂದಿದ್ದ 25 ಮಂದಿಯನ್ನೂ ಸೇರಿದಂತೆ ಅಂದಾಜು 125 ಮಂದಿಯನ್ನ ಕಳೆದ ಹದಿನಾಲ್ಕು ದಿನಗಳಕಾಲ ಜಿಲ್ಲಾಡಳಿತ ಹೊಸಪೇಟೆ ಹೊಟೇಲ್ ವೊಂದರಲ್ಲಿ ಕ್ವಾರೈಂಟೀನ್ ಮಾಡಲಾಗಿತ್ತು. ಹನ್ನೆರಡನೇಯ ದಿನಕ್ಕೆ ಟೆಸ್ಟ್ ಮಾಡಿದಾಗ ಏಳು ಮಂದಿಯಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

TRENDING