ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ ‘ಬಿಗ್ ಶಾಕ್’ ಕೊಟ್ಟ ರಾಜ್ಯ ಸರ್ಕಾರ

ದೇಶದಲ್ಲಿ ಕಾಣಿಸಿಕೊಂಡಿರುವ ಕೊರೋನಾ ಮಹಾಮಾರಿ ಕೇವಲ ಜೀವಹಾನಿ ಮಾಡಿರುವುದು ಮಾತ್ರವಲ್ಲ ಆರ್ಥಿಕ ಪರಿಸ್ಥಿತಿಯನ್ನೂ ಹದಗೆಡಿಸಿದೆ. ಹೀಗಾಗಿ ಆರ್ಥಿಕ ಪರಿಸ್ಥಿತಿಯನ್ನು ಸುಸ್ಥಿತಿಗೆ ತರಲು ಸರ್ಕಾರಗಳು ಹಲವು ಕ್ರಮಗಳಿಗೆ ಮುಂದಾಗಿವೆ.

ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ನೌಕರರು ಹಾಗೂ ಪಿಂಚಣಿದಾರರಿಗೆ ಮುಂದಿನ ಒಂದೂವರೆ ವರ್ಷಗಳವರೆಗೆ ತುಟ್ಟಿಭತ್ಯೆ ಹೆಚ್ಚಳ ಮಾಡಲು ನಿರ್ಧರಿಸಿದೆ. ಈ ಕುರಿತು ಹಣಕಾಸು ಇಲಾಖೆ ಆದೇಶ ಹೊರಡಿಸಿದ್ದು, ಇದರಿಂದಾಗಿ 2021 ರ ಜೂನ್ ವರೆಗೆ ತುಟ್ಟಿಭತ್ಯೆ ಹೆಚ್ಚಳ ಅನ್ವಯವಾಗುವುದಿಲ್ಲ.

ಇದರ ಜೊತೆಗೆ 2020 ನೇ ಸಾಲಿನ ಅವಧಿಗೆ ಗಳಿಕೆ ರಜೆ ನಗದೀಕರಣ ಪಡೆಯುವ ಸೌಲಭ್ಯವೂ ರದ್ದಾಗಿದೆ. 2020 ರ ಜನವರಿಯಿಂದ ಡಿಸೆಂಬರ್ ನಲ್ಲಿ ನಿವೃತ್ತಿ ಹೊಂದುವ ನೌಕರರು ಮತ್ತು ಅಧಿಕಾರಿಗಳಿಗೆ ಮಾತ್ರ ನಿವೃತ್ತಿ ಹೊಂದುವ ತಿಂಗಳಿಂದ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ.

 

Share Post

Leave a Reply

Your email address will not be published. Required fields are marked *

error: Content is protected !!