ಇಂದು 67 ಮಂದಿಗೆ ಕೊರೊನಾ..! ಸೋಂಕಿತರ ಸಂಖ್ಯೆ 1,462ಕ್ಕೆ ಏರಿಕೆ

ಬೆಂಗಳೂರು: ರಾಜ್ಯದ ಜನರಿಗೆ ಮಂಗಳವಾರ ಆತಂಕ ಸೃಷ್ಟಿಸಿದ್ದ ಕೊರೊನಾ ಸೋಂಕಿತರ ಸಂಖ್ಯೆಯು ಇಂದು ಇಳಿಕೆ ಕಂಡಿದೆ. ಇಂದು ರಾಜ್ಯದಲ್ಲಿ 67 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,462ಕ್ಕೆ ಏರಿಕೆಯಾಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ಇಂದು ಹಾಸನ 21, ಬೀದರ್ 10, ಮಂಡ್ಯ 8, ಉಡುಪಿ 6, ಕಲಬುರಗಿ 7, ಬೆಂಗಳೂರು, ತುಮಕೂರು, ರಾಯಚೂರಿನಲ್ಲಿ ತಲಾ 4, ಉತ್ತರ ಕನ್ನಡ, ದಕ್ಷಿಣ ಕನ್ನಡ, ಯಾದಗಿರಿಯಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ. 67 ಜನ ಸೋಂಕಿತರಲ್ಲಿ 52 ಮಂದಿ ಅಂತಾರಾಜ್ಯ (51 ಮಹಾರಾಷ್ಟ್ರ, 1 ವಿಶಾಖಪಟ್ಟಣಂ)ದಿಂದ ಬಂದವರೇ ಆಗಿದ್ದಾರೆ. ಮಂಗಳವಾರ ಒಂದೇ ದಿನ 149 ಜನರಿಗೆ ಸೋಂಕು ದೃಢಪಟ್ಟಿತ್ತು.

Share Post

Leave a Reply

error: Content is protected !!