Monday, January 25, 2021
Home ಜಿಲ್ಲೆ ಬೆಂಗಳೂರು ಗ್ರಾ.ಪಂ ಸದಸ್ಯನ ಕೊಲೆ :ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಇದೀಗ ಬಂದ ಸುದ್ದಿ

ಗ್ರಾ.ಪಂ ಸದಸ್ಯನ ಕೊಲೆ :ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಂಗಳೂರು: ಮಾಚೋಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ.

ಮೋಹನ್ ಕುಮಾರ್ ಬಂಧಿತ ಆರೋಪಿಯಾಗಿದ್ದು, ಮಾಚೋಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಲಕ್ಷ್ಮೀನಾರಾಯಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಏಪ್ರಿಲ್ 2019ರಲ್ಲಿ ನಡೆದಿದ್ದ ಕೊಲೆ ಪ್ರಕರಣದ ಜಾಡು ಹಿಡಿದ ಸಿಸಿಬಿ ಪೊಲೀಸರು ತಲೆಮರಿಸಿಕೊಂಡಿದ್ದ ಮೋಹನ್ ಕುಮಾರ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ, ಕೇಬಲ್ ನ್ಯೂಸ್ ಚಾನೆಲ್ ನಿರ್ದೇಶಕನಾಗಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದು, ಮುಂದಿನ ತನಿಖೆಗಾಗಿ ಆತನನ್ನು ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವಶಕ್ಕೆ ನೀಡಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

 

TRENDING