Friday, January 15, 2021
Home ಜಿಲ್ಲೆ ಬೆಂಗಳೂರು ರಾಜ್ಯದಲ್ಲಿಂದು 138 ಕೊರೊನಾ ಕೇಸ್ ಪತ್ತೆ..! ಸೋಂಕಿತರ ಸಂಖ್ಯೆ 1743ಕ್ಕೆ ಏರಿಕೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿಂದು 138 ಕೊರೊನಾ ಕೇಸ್ ಪತ್ತೆ..! ಸೋಂಕಿತರ ಸಂಖ್ಯೆ 1743ಕ್ಕೆ ಏರಿಕೆ

ಬೆಂಗಳೂರು: ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 5 ಗಂಟೆ ಅವಧಿಯಲ್ಲಿ ರಾಜ್ಯದ 138 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1743ಕ್ಕೆ ಏರಿಕೆಯಾಗಿದೆ. ಇಂದು ಚಿಕ್ಕಬಳ್ಳಾಪುರ ರಾಜ್ಯಕ್ಕೆ ದೊಡ್ಡ ಶಾಕ್ ನೀಡಿದ್ದು ಬರೋಬ್ಬರಿ 47 ಜನರಲ್ಲಿ ಸೋಂಕು ದೃಢವಾಗಿದೆ. ಇವರಲ್ಲಿ ಬಹುತೇಕ ಎಲ್ಲರೂ ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿದ್ದು, ಅವರನ್ನು ಕ್ವಾರಂಟೈನ್​ನಲ್ಲಿ ಇಡಲಾಗಿತ್ತು. ಅದ್ರಲ್ಲೂ ಗೌರಿಬಿದನೂರು ಒಂದರಲ್ಲೇ ಹೆಚ್ಚು ಜನರಲ್ಲಿ ಸೋಂಕು ದೃಢವಾಗಿದ್ದು ಬೆಚ್ಚಿ ಬೀಳಿಸುವಂತಾಗಿದೆ.

26 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 597ಕ್ಕೆ ಏರಿದೆ ಅಂತಾ ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೊರೊನಾ ಕಾರಣದಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ. ಆದ್ರೆ ಇಲ್ಲಿ ತನಕ 41 ಜನರು ಸೋಂಕಿನಿಂದಾಗಿ ಸಾವನ್ನಪ್ಪಿದಂತಾಗಿದೆ. ಅಲ್ಲದೇ ಒಬ್ಬ ಸೋಂಕಿತ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಾವಿನ ಒಟ್ಟು ಸಂಖ್ಯೆ 42 ಆದಂತಾಗಿದೆ.

TRENDING