ಖಾಸಗಿ ಬಸ್ ಪ್ರಯಾಣಿಕರಿಗೆ ʼಸಿಹಿ ಸುದ್ದಿ

ರಾಯಚೂರು: ಈಗಾಗಲೇ ರಾಜ್ಯಾದ್ಯಂತ ಕೆಎಸ್‌ಆರ್ಟಿಸಿ ಬಸ್ ಸಂಚಾರ ಆರಂಭವಾಗಿದ್ದು ಮುಂದಿನ ಎರಡು ದಿನಗಳಲ್ಲಿ ಖಾಸಗಿ ಬಸ್ ಸಂಚಾರ ಕೂಡ ಆರಂಭವಾಗಲಿದೆ. ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕುರಿತು ಮಾಹಿತಿ ನೀಡಿದ್ದು, ಖಾಸಗಿ ವಾಹನಗಳ ಮಾಲೀಕರ ಜೊತೆಗೆ ಸಭೆ ನಡೆಸಿದ್ದು, ಶೇಕಡ 50 ರಷ್ಟು ದರ ಏರಿಕೆ ಬೇಡಿಕೆ ತಿರಸ್ಕರಿಸಲಾಗಿದೆ. ಸೋಂಕು ತಡೆಯುವ ಉದ್ದೇಶದಿಂದ ಸರ್ಕಾರಿ ಬಸ್ ಗಳಲ್ಲಿ ಅನುಸರಿಸಲಾಗುವ ನಿಯಮಗಳನ್ನು ಖಾಸಗಿ ಬಸ್ ಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಕೆಂಪು ವಲಯ ಮತ್ತು ಬಫರ್ ಜೋನ್ ಗಳಿಗೆ ಪ್ರಯಾಣಿಕರನ್ನು ಕರೆದುಕೊಂಡು ಹೋಗದಂತೆ ಖಾಸಗಿ ಬಸ್ ಮಾಲೀಕರಿಗೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸೇವಾಮನೋಭಾವದ ಉದ್ದೇಶದಿಂದ ಸರಕಾರಿ ಬಸ್ ಸಂಚಾರ ಆರಂಭಿಸಲಾಗಿದೆ. ಇಲಾಖೆಗೆ ನಷ್ಟವಾದರೂ ಪ್ರಯಾಣಿಕರಿಗೆ ಹೆಚ್ಚಿನ ಟಿಕೆಟ್ ದರ ವಸೂಲಿ ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!