ಮಂಡ್ಯ ಜಿಲ್ಲೆಯ 2 ಪೊಲೀಸ್ ಠಾಣೆಯೇ ಸೀಲ್ ಡೌನ್: ಪೊಲೀಸರು ಕ್ವಾರಂಟೈನ್!

ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯ ಮುಖ್ಯಪೇದೆಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಎರಡು ಪೊಲೀಸ್ ಠಾಣೆಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ.

ಕೆ.ಆರ್.ಪೇಟೆಯ ಪಟ್ಟಣ ಪೋಲಿಸ್ ಠಾಣೆ ಮತ್ತು ಗ್ರಾಮಾಂತರ ಪೋಲಿಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ. ಕೆ.ಆರ್.ಪೇಟೆ ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಠಾಣೆಯ ಕೆಲಸಗಳು ಪಯರ್ಾಯವಾಗಿ ಕಿಕ್ಕೇರಿ ಠಾಣೆಯಲ್ಲಿ ನಡೆಯಲಿವೆ ಎಂದು ವಿವರಿಸಿದ ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ಪರಶುರಾಂ, ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು 30 ಜನರು ಪೋಲಿಸ್ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್ ಕರ್ತವ್ಯಕ್ಕೆ ಧಕ್ಕೆ ಉಂಟಾಗದಂತೆ ವಿಶೇಷ ಪೋಲಿಸ್ ಭದ್ರತೆಯನ್ನು ಕಲ್ಪಿಸಲಾಗಿದೆಕ್ವಾರಂಟೈನ್ ಕೇಂದ್ರಗಳಿಗೆ ವಿಶೇಷ ಭದ್ರತೆಯನ್ನು ಒದಗಿಸಲಾಗಿದೆ ಎಂದರು.

ಶ್ರೀರಂಗಪಟ್ಟಣ ಡಿವೈಎಸ್ಪಿ ಅರುಣ್ ನಾಗೇಗೌಡ, ನಾಗಮಂಗಲ ಡಿವೈಎಸ್ ಪಿ.ಕೆ.ಬಿ.ವಿಶ್ವನಾಥ್, ವೃತ್ತ ನಿರೀಕ್ಷರಾದ ಯೋಗೇಶ್, ಕೆ.ಎನ್.ಸುಧಾಕರ್, ಸಬ್ ಇನ್ಸ್ಪೆಕ್ಟರ್ಗಳಾದ ಬ್ಯಾಟರಾಯಗೌಡ, ಡಿ.ಲಕ್ಷ್ಮಣ್ ಮತ್ತು ಪೋಲಿಸ್ ಸಿಬ್ಬಂದಿ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share Post

Leave a Reply

Your email address will not be published. Required fields are marked *

error: Content is protected !!