ಉಭಯಗಾನ ವಿದುಷಿ ಶ್ಯಾಮಲಾ ಜಿ. ಭಾವೆ ಇನ್ನಿಲ್ಲ

ಬೆಂಗಳೂರು: ಹಿಂದೂಸ್ಥಾನಿ ಹಾಗೂ ಕರ್ನಾಟಕ ಶಾಸ್ತ್ರೀಯ ಸಂಗೀತ ಎರಡರಲ್ಲಿಯೂ, ತಮ್ಮದೇ ಆದ ಛಾಪು ಮೂಡಿಸಿದ್ದ ಸಂಗೀತ ವಿದುಷಿ ಶ್ಯಾಮಲಾ ಜಿ ಭಾವೆ ಕೊನೆಯುಸಿರೆಳೆದಿದ್ದಾರೆ.

1941ರ ಮಾರ್ಚ್ 14ರಂದು ಜನಿಸಿದ್ದ ಇವರು, ಸಂಗೀತ ಹಾಗೂ ರಂಗಭೂಮಿ ಪರಂಪರೆಯ ಮನೆತನದಲ್ಲಿ ಬೆಳೆದವರು. 1950 ರಲ್ಲಿ ಬಾಲ್ಯದಲ್ಲಿಯೇ ತಮ್ಮ ಪ್ರತಿಭೆ ತೋರಿದ್ದರು. ಇವರ ಕುಟುಂಬ ಮೂರು ತಲೆಮಾರುಗಳಿಂದ ಸಂಗೀತವನ್ನೇ ಉಸಿರಾಗಿಸಿಕೊಂಡಿದೆ.

ಹಲವು ವಿದ್ಯಾರ್ಥಿಗಳನ್ನು ಸಂಗೀತ ಕ್ಷೇತ್ರಕ್ಕೆ ಕೊಡುಗೆ ನೀಡಿದ ಇವರು, ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು. ದೇಶ-ವಿದೇಶಗಳಲ್ಲಿ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು, 73 ವರ್ಷಗಳ ಕಾಲ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ.

 

Share Post

Leave a Reply

Your email address will not be published. Required fields are marked *

error: Content is protected !!