ಪಾಕಿಸ್ತಾನದಲ್ಲಿ ಭೀಕರ ವಿಮಾನ ದುರಂತ: 107 ಪ್ರಯಾಣಿಕರು ದುರ್ಮರಣ

ಇಸ್ಲಾಮಾಬಾದ್:ಪಾಕಿಸ್ತಾನದ ಅಂತಾರಾಷ್ಟ್ರೀಯ ವಿಮಾನವೊಂದು ಕರಾಚಿ ವಿಮಾನ ನಿಲ್ದಾಣ ಸಮೀಪ ಪತನಕ್ಕೀಡಾಗಿದ್ದು, ವಿಮಾನದಲ್ಲಿ 91 ಮಂದಿ ಇದ್ದಿರುವುದಾಗಿ ವರದಿ ತಿಳಿಸಿದೆ. ಎ-320 ವಿಮಾನ ಲ್ಯಾಂಡ್ ಆಗುವ ಒಂದು ನಿಮಿಷದ ಮೊದಲು ಈ ದುರಂತ ಸಂಭವಿಸಿರುವುದಾಗಿ ವರದಿ ತಿಳಿಸಿದೆ. ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಈ ಘಟನೆ ನಡೆದಿದೆ. ಆದರೆ ಸಾವು-ನೋವಿನ ಬಗ್ಗೆ ತಿಳಿದು ಬಂದಿಲ್ಲ. ಪಾಕಿಸ್ತಾನ ಮಾಧ್ಯಮಗಳ ವರದಿ ಪ್ರಕಾರ, ವಿಮಾನದಲ್ಲಿ 91 ಮಂದಿ ಪ್ರಯಾಣಿಸುತ್ತಿದ್ದರು. ಸಮೀಪದ ಮನೆಗಳಿಗೆ ಬೆಂಕಿಹೊತ್ತಿಕೊಂಡಿರುವ ಫೂಟೇಜ್ ಅನ್ನು ಪಾಕ್ ಮಾಧ್ಯಮಗಳು ಬಿತ್ತರಿಸುತ್ತಿರುವುದಾಗಿ ವರದಿ ವಿವರಿಸಿದೆ.

Share Post

Leave a Reply

Your email address will not be published. Required fields are marked *

error: Content is protected !!