Monday, January 25, 2021
Home ಸುದ್ದಿ ಜಾಲ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಚೇತರಿಕೆ :ಸಚಿವ ಬಿ.ಶ್ರೀರಾಮುಲು

ಇದೀಗ ಬಂದ ಸುದ್ದಿ

ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಚೇತರಿಕೆ :ಸಚಿವ ಬಿ.ಶ್ರೀರಾಮುಲು

ಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರ ಆರೋಗ್ಯ ಸ್ಥಿರವಾಗಿದ್ದು, ಅವರ ಆರೋಗ್ಯ ತಪಾಸಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿರುವುದಾಗಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಬಂದ ತಕ್ಷಣ ಹಾಸನಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಆಸ್ಪತ್ರೆಗೆ ತೆರಳಿ ತಿಮ್ಮಕ್ಕನವರ ಆರೋಗ್ಯದ ಬಗ್ಗೆ ಮುತುವರ್ಜಿ ವಹಿಸಲು ಸೂಚಿಸಲಾಗಿತ್ತು.

ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ತಿಮ್ಮಕ್ಕರನ್ನು ಭೇಟಿಯಾಗಿದ್ದಾರೆ. ಹಾಗೆಯೇ ಆಸ್ಪತ್ರೆಯ ವೈದ್ಯರಿಂದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ತಿಮ್ಮಕ್ಕ ಅವರು ಚಿಕಿತ್ಸೆಗೆ ಸ್ಪಂದಿಸಿದ್ದು, ಆರೋಗ್ಯ ಸ್ಥಿರವಾಗಿದೆ. ತಿಮ್ಮಕ್ಕ ಅವರು ಹಾಸನ ಜಿಲ್ಲೆಯಲ್ಲಿ ಇರುವಷ್ಟು ದಿನ ಅವರ ಆರೋಗ್ಯ ತಪಾಸಣೆಗೆ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಸಚಿವ ರಾಮುಲು ಟ್ವೀಟ್ಮಾಡಿದ್ದಾರೆ.

TRENDING