ನಾಳೆ ಕಂಪ್ಲೀಟ್ ಲಾಕ್ಡೌನ್ : ಏನಿರುತ್ತೆ ..? ಏನಿರಲ್ಲ..? ಇಲ್ಲಿದೆ ಡೀಟೇಲ್ಸ್

ಬೆಂಗಳೂರು, ;ಕೊರೋನಾ ವೈರಸ್ ಸೋಂಕು ಹಬ್ಬುವುದನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಪ್ರತಿ ಭಾನುವಾರ ಕಫ್ರ್ಯೂ ಮಾದರಿಯ ಪೂರ್ಣ ಪ್ರಮಾಣದ ಲಾಕ್‍ಡೌನ್ ಅನ್ನು ರಾಜ್ಯ ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದಲೇ ರಾಜ್ಯದ್ಯಾಂತ ಜಾರಿಗೆ ಬರಲಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಳ್ಳಲಿದೆ. ನಾಳೆ ಸಂಪೂರ್ಣ ಲಾಕ್‍ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ಸಮೂಹ ಸಾರಿಗೆ ಸೇವೆ ಇರುವುದಿಲ್ಲ. ಮಾತ್ರವಲ್ಲ ಬಸ್, ಆಟೋ, ಟ್ಯಾಕ್ಸಿ ಸಂಚಾರವನ್ನು ಸಹ ನಿಷೇಧಿಸಲಾಗಿದೆ.ಅಗತ್ಯ ಸೇವೆಗಳಾದ ಹಾಲು, ಹಣ್ಣು, ತರಕಾರಿ ಮಾರಾಟದಂತಹ ಚಟುವಟಿಕೆಗಳು ಮುಂದುವರೆಯಲಿದ್ದು ಔಷಧಿ ಅಂಗಡಿ, ಆಸ್ಪತ್ರೆಗಳು ಕಾರ್ಯನಿರ್ವಹಿಸಲಿವೆ. ನಾಳೆ ರಾಜ್ಯದಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದರೂ ಸಹ ಪೂರ್ವ ನಿಗದಿತ ಮದುವೆಗಳಿಗೆ ಅನುವು ಮಾಡಿಕೊಟ್ಟಿರುವ ಸರ್ಕಾರ ಸಾಮಾಜಿಕ ಅಂತರ ಕಾಯ್ದುಕೊಂಡು ಗರಿಷ್ಠ 50 ಅತಿಥಿಗಳ ಸಂಖ್ಯೆ ಮೀರದಂತೆ ಸರಳ ವಿವಾಹ ನೆರವೇರಿಸಲು ಅನುಮತಿ ನೀಡಿದೆ. ಇದರ ಹೊರತಾಗಿ ಬೇರೆ ಶುಭ-ಸಮಾರಂಭಗಳು, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ನಾಳೆ ರಾಜ್ಯದಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದ್ದು ರಾಜ್ಯದಲ್ಲಿ ಸಂಪೂರ್ಣ ಲಾಕ್‍ಡೌನ್ (ಸ್ವಯಂ ನಿರ್ಬಂಧ ಇರಲಿದೆ. ಇಂದು ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 7ರವರೆಗೆ ಕಫ್ರ್ಯೂ ಜಾರಿಯಲ್ಲಿರುತ್ತದೆ ಎಂದು ಸರ್ಕಾರ ಘೋಷಿಸಿದೆ.ವಾರದ ಪೂರ್ವಾರ್ಧದಲ್ಲಿ ಲಾಕ್‍ಡೌನ್ ಸಡಿಲಿಸಿರುವುದಾದರೂ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಭಾನುವಾರ ನಿರ್ಬಂಧ ಮುಂದುವರೆಸುವುದಾಗಿ ಸರ್ಕಾರ ಹೇಳಿತ್ತು. ಅದರಂತೆ ನಾಳೆ ಕಫ್ರ್ಯೂ ಜಾರಿಗೆ ತರಲಾಗಿದ್ದು ಲಾಕ್‍ಡೌನ್ ಸಡಿಲಿಕೆಗೂ ಮುನ್ನ ಇದ್ದಂತಹ ಎಲ್ಲಾ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಕಫ್ರ್ಯೂ ಅವಧಿಯಲ್ಲಿ ರಾಜ್ಯದಲ್ಲಿ ಭಾರೀ ಬಿಗಿ ಭದ್ರತೆ ಇರಲಿದೆ. ಈ ಅವಧಿಯಲ್ಲಿ ಸರ್ಕಾರದ ಸೂಚನೆಗಳನ್ನು ಪಾಲಿಸದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಿಎಂಟಿಸಿ ಹಾಗೂ ಕೆಎಸ್‍ಆರ್‍ಟಿಸಿ ಬಸ್ ಸೇವೆ ಬಂದ್ ಆಗಲಿದೆ. ಓಲಾ, ಉಬರ್, ಟ್ಯಾಕ್ಸಿ ಮತ್ತು ಖಾಸಗಿ ವಾಹನಗಳ ಓಡಾಡುವಂತಿಲ್ಲ. ಸಲೂನ್, ಪಾರ್ಲರ್, ಬಟ್ಟೆಅಂಗಡಿ, ಪಾರ್ಕ್‍ಗಳು ಬಂದ್ ಆಗಿರುತ್ತವೆ. ಇನ್ನು ಫ್ಯಾಕ್ಟರಿ, ಕಾರ್ಖಾನೆ, ಕಂಪನಿಗಳು ಕೂಡ ಬಾಗಿಲು ಮುಚ್ಚಿರುತ್ತವೆ. ಎಲ್ಲಾ ಮದ್ಯದ ಅಂಗಡಿಗಳೂ ಬಂದ್ ಮಾಡಲಿವೆ. ಅಷ್ಟೇ ಅಲ್ಲದೆ ಅಗತ್ಯ ವಸ್ತುಗಳನ್ನ ಬಿಟ್ಟು ಉಳಿದ ಅಂಗಡಿಗಳು ತೆರೆಯಲ್ಲ. ಜೊತೆಗೆ ಅನಗತ್ಯವಾಗಿ ಹೊರಗೆ ಯಾರೂ ಕೂಡ ಓಡಾಡುವಂತಿಲ್ಲ. ಹೀಗಾಗಿ ಬ್ಯಾರಿಕೇಡ್ ಹಾಕಿ ರಸ್ತೆಗಳನ್ನು ಬಂದ್ ಆಗಲಿವೆ. ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಹಾಕಲಾಗಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಲಾಗಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಕಫ್ರ್ಯೂ ಜಾರಿಯಲ್ಲಿರಲಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆಕಫ್ರ್ಯೂ ಮಾದರಿ ವ್ಯವಸ್ಥೆ ಜಾರಿಗೊಳಿಸಲಿದ್ದಾರೆ. ರಾಜ್ಯ ಒಳಬರುವ ಹಾಗೂ ರಾಜ್ಯದಿಂದ ಹೊರಹೋಗುವ ವಾಹನಗಳಿಗೂ ಬ್ರೇಕ್ ಹಾಕಲಾಗಿದ್ದು, ಆ ದಿನ ನಾಡಿನ ಎಲ್ಲಾ ಗಡಿಗಳನ್ನು ಕೂಡ ಬಂದ್ ಮಾಡಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144ರ ಅಡಿಯಲ್ಲಿ ಅಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈಗಾಗಲೇ ಪೊಲೀಸರು ರಾಜ್ಯದಾದ್ಯಂತ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿದ್ದು, ಜನರ ಸಂಚಾರಕ್ಕೆ ನಿಷೇಧವಿದ್ದು, ಅನಗತ್ಯವಾಗಿ ಓಡಾಡಿದರೆ ಮುಲಾಜಿಲ್ಲದೆ ಪ್ರಕರಣ ದಾಖಲಿಸಲು ಪೊಲೀಸರು ನಿರ್ಧರಿಸಲಾಗಿದೆ. ಇಂದು ಸಂಜೆ 7 ಗಂಟೆ ಬಳಿಕ ಸರ್ಕಾರಿ ಬಸ್, ರೈಲು ಸೇರಿದಂತೆ ಯಾವುದೇ ವಾಹನ ಸಂಚಾರ ಇರುವುದಿಲ್ಲ. ನಾಳೆ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶವಿದ್ದು, ಉಳಿದಂತೆ ಯಾವುದೇ ಸೇವೆ ಲಭ್ಯ ಇರುವುದಿಲ್ಲ. ಕರ್ನಾಟಕ ಸರ್ಕಾರ 4ನೇ ಹಂತದ ಲಾಕ್‍ಡೌನ್ ಮಾರ್ಗಸೂಚಿಯಲ್ಲಿಯೂ ಇದನ್ನು ಸ್ಪಷ್ಟಪಡಿಸಿದೆ. ಲಾಕ್‍ಡೌನ್ 4ರ ಮಾರ್ಗಸೂಚಿ ಬಿಡುಗಡೆ ಮಾಡುವಾಗ ನೀಡಿದ ಆದೇಶವನ್ನು ಜನರು ಪಾಲನೆ ಮಾಡಬೇಕು. ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡಲು ಪೊಲೀಸರ ಜೊತೆ ಜನರು ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ನಾಳೆ ಕಫ್ರ್ಯೂಜಾರಿಯಲ್ಲಿರಲಿದೆ. ವೈದ್ಯಕೀಯ, ದಿನಸಿ, ಔಷಧಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಅನಗತ್ಯವಾಗಿ ಓಡಾಡುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ಕೊಟ್ಟಿದ್ದಾರೆ. ಕೇಂದ್ರಾಡಳಿತ ಮತ್ತು ರಾಜ್ಯಗಳು ಕೇಂದ್ರ ಗೃಹ ಇಲಾಖೆ ಮಾರ್ಗಸೂಚಿಯನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎಂಬ ಆರೋಪಗಳು ಇವೆ. ಗೃಹ ಇಲಾಖೆ ಕಾರ್ಯದರ್ಶಿ ಈಗಾಗಲೇ ಈ ಕುರಿತು ಪತ್ರವನ್ನು ಬರೆದಿದ್ದಾರೆ. ಲಾಕ್‍ಡೌನ್ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಹೀಗಾಗಿ ಭಾರೀ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಲಾಗಿದೆ.ಕಪ್ರ್ಯೂ ಹಿನ್ನೆಲೆ ನಗರದಲ್ಲಿ ಇಂದು ಸಂಜೆಯಿಂದಲೇ ಮದ್ಯ ಮಾರಾಟ ಬಂದ್ ಆಗಲಿದೆ. ಆದರೆ, ಮಾಂಸ ಮಾರಾಟಕ್ಕೆ ಅನುಮತಿ ಇದೆ. ಸಾಮಾಜಿಕ ಅಂತರ, ಮಾಸ್ಕ್ ಹಾಕಿಯೇ ಖರೀದಿಸಬೇಕು. ನಿಯಮ ಪಾಲನೆ ಮಾಡದಿದ್ದರೆ, ಅಂತಹ ಅಂಗಡಿಗಳನ್ನು ಪೊಲೀಸರು ಬಂದ್ ಮಾಡಲಿದ್ದಾರೆ.

# ಸೇವೆಗಳು ಲಭ್ಯ :
ಹಣ್ಣುತರಕಾರಿ ,ಮೊಟ್ಟೆ ಮಾಂಸ,ದಿನಸಿ ಪದಾರ್ಥಅಂಗಡಿ
ಆಸ್ಪತ್ರೆ, ಔಷಧಿ ಅಂಗಡಿಗಳು ಕಾರ್ಯನಿರ್ವಾಹಣೆ
ಮಾಧ್ಯಮ, ವೈದ್ಯರು, ನರ್ಸ್, ಆಂಬುಲೆನ್ಸ್‍ಓಡಾಟಕ್ಕೆ ಅವಕಾಶ
ಅನಾರೋಗ್ಯ ಸಮಸ್ಯೆವುಳ್ಳರಿಗೆ ಆಸ್ಪತ್ರೆಗೆ ಹೋಗಲು ಅವಕಾಶ
ಗರ್ಭಿಣಿ ಸ್ತ್ರೀಯರಿಗೆ ತಪಾಸಣೆಗೆ ಸಮಸ್ಯೆಇಲ್ಲ

# ಏನಿರಲ್ಲ :
ಸಾರ್ವಜನಿಕರ ಸಂಚಾರ ನಿರ್ಬಂಧ
ಅಗತ್ಯ ವಸ್ತು ಹೊರತುಪಡಿಸಿ ಉಳಿದ ಅಂಗಡಿ ಮುಗಟ್ಟು ಬಂದ್
ನಗರದ ಎಲ್ಲಾ ಪ್ರಮುಖ ರಸ್ತೆ ಬಂದ್
ಬಾರ್, ಸೆಲ್ಯೂನ್, ಪ್ಯಾನ್ಸಿ ಸ್ಟೋರ್ ಬಂದ್
ಎಲ್ಲಾ ಗಾರ್ಮೆಂಟ್ಸ್ ಫ್ಯಾಕ್ಟರಿ, ಎಲ್ಲಾ ಕಾರ್ಖಾನೆಗಳು, ಕಂಪನಿಗಳು ಬಂದ್
ಎಲ್ಲಾ ಪಾರ್ಕ್‍ಗಳಿಗೂ ಬೀಗ. ಜಾಗಿಂಗ್,ವಾಕಿಂಗ್‍ಗೆ ಇಲ್ಲ ಅವಕಾಶ
ಆಟೋ, ಟ್ಯಾಕ್ಸಿ ,ಕ್ಯಾಬ್ ಸೇವೆ ಬಂದ್
ಖಾಸಗಿ ವಾಹನ ಬಳಸಿ ಓಡಾಡುವಂತಿಲ್ಲ

 

Share Post

Leave a Reply

Your email address will not be published. Required fields are marked *

error: Content is protected !!