ಶ್ರೀಲಂಕಾ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಕೊರೊನಾ ವೈರಸ್‌ ಸೋಂಕು ಸೃಷ್ಟಿಸಿರುವ ಆರೋಗ್ಯ ಮತ್ತು ಆರ್ಥಿಕ ಪರಿಣಾಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರೊಂದಿಗೆ ಶನಿವಾರ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ‘ಅಧ್ಯಕ್ಷ ಗೊಟಬಯ ಅವರೊಂದಿಗೆ ಮಾತುಕತೆ ನಡೆಸಲಾಯಿತು. ಅವರ ನಾಯಕತ್ವದಲ್ಲಿ ಶ್ರೀಲಂಕಾ ಕೋವಿಡ್‌-19 ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತಿದೆ. ಕೋವಿಡ್-19 ಸೃಷ್ಟಿಸಿರುವ ಆರೋಗ್ಯ ಮತ್ತು ಆರ್ಥಿಕ ಪರಿಣಾಮಗಳನ್ನು ಎದುರಿಸಲು ಭಾರತವು ತನ್ನ ನೆರೆ ರಾಷ್ಟ್ರಕ್ಕೆ ಬೆಂಬಲ ನೀಡುವುದನ್ನು ಮುಂದುವರೆಸುತ್ತದೆ’ ಎಂದು ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಭಾರತದ ನೆರವಿನ ಅಭಿವೃದ್ಧಿ ಯೋಜನೆಗಳಿಗೆ ಮತ್ತಷ್ಟು ವೇಗ ನೀಡಲು ಮತ್ತು ಹೂಡಿಕೆ ಸಂಪರ್ಕವನ್ನು ಬಲಪಡಿಸಲು ನಾವು ಒಪ್ಪಿದ್ದೇವೆ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!