ಮೇ.31ರವರೆಗೂ ಶ್ರಮಿಕ್ ರೈಲಿನಲ್ಲಿ ಸ್ವಗ್ರಾಮಗಳಿಗೆ ಪ್ರಯಾಣಿಸುವ ಕಾರ್ಮಿಕರ ವೆಚ್ಚ ಸರ್ಕಾರವೇ ಭರಿಸಲಿದೆ:ಸಿಎಂ ಯಡಿಯೂರಪ್ಪ

ಬೆಂಗಳೂರು: ಹೊರ ರಾಜ್ಯದಿಂದ ತವರಿಗೆ ಆಗಮಿಸುವ ಕಾರ್ಮಿಕರ ವೆಚ್ಚದ ಜೊತೆಗೆ ಸ್ವಗ್ರಾಮಗಳಿಗೆ ಮೇ.31ರವರೆಗೆ ತೆರಳುವ ಹೊರ ರಾಜ್ಯದ ಕಾರ್ಮಿಕರ ಮತ್ತು ಲಾಕ್”ಡೌನ್ ನಲ್ಲಿ ಸಿಲುಕಿರುವವರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ.

ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳ ಬಯಸುವ ವಲಸೆ ಕಾರ್ಮಿಕರು ಮತ್ತು ಲಾಕ್’ಡೌನ್ ನಲ್ಲಿ ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.

ತಮ್ಮ ಸ್ವಗ್ರಾಮಗಳಿಗೆ ಹಿಂದಿರುಗಲು ಪ್ರಯಾಣದ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲ ಎಂಬ ವಲಸೆ ಕಾರ್ಮಿಕರ ಮನವಿಯನ್ನು ಸರ್ಕಾರವು ಪರಿಗಣಿಸಿದೆ. ನಮ್ಮ ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ. ಅವರ ಕಷ್ಟಕ್ಕೆ ಸರ್ಕಾರವು ಸ್ಪಂದಿಸಬೇಕು ಎಂಬುದು ನನ್ನ ದೃಢ ನಿರ್ಧಾರ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಮೇ.31ರವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಮತ್ತು ಲಾಕ್’ಡೌನ್ ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!