ರಂಜಾನ್ ಹಬ್ಬದ ಪ್ರಯುಕ್ತ ಭರ್ಜರಿ ಗಿಫ್ಟ್..! ‘ರಾಬರ್ಟ್’ ಚಿತ್ರದ ಹೊಸ ಪೋಸ್ಟರ್ ರಿಲೀಸ್

ರಂಜಾನ್‌ ಹಬ್ಬದ ಪ್ರಯುಕ್ತ ಬಹುನಿರೀಕ್ಷಿತ ‘ರಾಬರ್ಟ್‌’ ಚಿತ್ರತಂಡ ಭರ್ಜರಿ ಗಿಫ್ಟ್ ನೀಡಿದೆ. ಚಿತ್ರದ ಹೊಸ ಕಲರ್‌ಫುಲ್ ಪೋಸ್ಟರ್ ರಿಲೀಸ್ ಮಾಡಿದೆ. ಇದುವರೆಗೂ ರಿಲೀಸ್ ಆದ ಪೋಸ್ಟರ್‌ಗಳಲ್ಲಿ 2 ವಿಭಿನ್ನ ಅವತಾರಗಳಲ್ಲಿ ಕಾಣಿಸಿಕೊಂಡಿದ್ದ ದರ್ಶನ್ ಈ ಪೋಸ್ಟರ್‌ನಲ್ಲಿ ಹೊಸ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ನಿರ್ದೇಶಕ ತರುಣ್‌ ಸುಧೀರ್‌ ಕ್ರಿಸ್‌ಮಸ್‌, ಸಂಕ್ರಾತಿ, ಯುಗಾದಿ ಹಬ್ಬಗಳ ರೀತಿಯೇ ರಂಜಾನ್‌ ಹಬ್ಬದ ಪ್ರಯುಕ್ತವೂ ಹೊಸ ಪೋಸ್ಟರ್‌ ರಿಲೀಸ್‌ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರೋ ದರ್ಶನ್ ‘ಎಲ್ಲಾ ನಲ್ಮೆಯ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ನಮ್ಮ ‘ರಾಬರ್ಟ್’ ಚಿತ್ರದ ಪೋಸ್ಟರ್ ನಿಮಗಾಗಿ. ಎಲ್ಲರ ಜೀವನಶೈಲಿ ಸಹಜ ಸ್ಥಿತಿಗೆ ಬರುತ್ತಿದ್ದಂತೆ ಚಿತ್ರವೂ ನಿಮ್ಮ ಮಡಿಲಿಗೆ ಸೇರಲಿದೆ. ಮನೆಯಲ್ಲಿ ಇರಿ, ಮನೆಯವರಿಗಾಗಿ ಜಾಗೃತರಾಗಿರಿ’ ಅಂತಾ ಮುಸ್ಲಿಂ ಬಾಂಧವರಿಗೆ ಶುಭ ಹಾರೈಸಿದ್ದಾರೆ.

ಎಲ್ಲವೂ ಅಂದುಕೊಂಡಂತಾಗಿದ್ದರೆ ಇಷ್ಟು ಹೊತ್ತಿಗಾಗಲೇ ‘ರಾಬರ್ಟ್‌’ ಚಿತ್ರ ತೆರೆಕಂಡಿರಬೇಕಿತ್ತು. ಏಪ್ರಿಲ್‌ನಲ್ಲಿಯೇ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಕೊರೊನಾದಿಂದಾಗಿ ಚಿತ್ರ ರಿಲೀಸ್ ತಡವಾಗಿದೆ. ಹೊಸ ರಿಲೀಸ್‌ ಡೇಟ್‌ ಬಗ್ಗೆ ಇನ್ನೂ ಮಾಹಿತಿ ಹೊರಬಿದ್ದಿಲ್ಲ.

Share Post

Leave a Reply

error: Content is protected !!