Friday, September 25, 2020
Home ಜಿಲ್ಲೆ ಹಾಸನ ಹಾಸನದಲ್ಲಿ ಒಂದೇ ದಿನ 23 ಹೊಸ ಪ್ರಕರಣ ಪತ್ತೆ : ಸೋಂಕಿತರ ಸಂಖ್ಯೆ 122ಕ್ಕೆ...

ಇದೀಗ ಬಂದ ಸುದ್ದಿ

ಕೊರೊನಾ ಹಾವಳಿ ನಡುವೆ ಬಿಹಾರ ವಿಧಾನಸಭೆ ಚುನಾವಣೆಗೆ...

ಕೊರೊನಾ ವೈರಸ್ ಹಾವಳಿ ನಡುವೆದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಬಿಹಾರದ 243 ಕ್ಷೇತ್ರಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಅಕ್ಟೋಬರ್ 28, ನವೆಂಬರ್ 3 ಮತ್ತು 7ರಂದು ಮೂರು ಹಂತಗಳಲ್ಲಿ...

ಐಪಿಎಲ್-2020 : ಇಂದು ಚೆನ್ನೈ ಸೂಪರ್ ಕಿಂಗ್ಸ್‌...

 ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಸೆಣಸಾಟ ನಡೆಸಲಿವೆ. ಚೆನ್ನೈ ತಂಡವು ಟೂರ್ನಿಯ ಮೊದಲ ಪಂದ್ಯದಲ್ಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ವಿರುದ್ಧ ಜಯಿಸಿತ್ತು. ಎರಡನೇ...

ಕಣ್ವ ಗ್ರೂಪ್‌ನ ನೂರಾರು ಕೋಟಿ ಮೌಲ್ಯದ...

ಕಣ್ವ ಗ್ರೂಪ್‌ನಲ್ಲಿ 650 ಕೋಟಿಗೂ ಅಧಿಕ ಹೂಡಿಕೆ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಕಣ್ವ ಗ್ರೂಪ್‌ಗೆ ಸೇರಿದ 255.17 ಕೋಟಿ ರೂ. ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಸರ್ಕಾರಿ ಗೌರವಗಳೊಂದಿಗೆ ಶಾಸಕ ನಾರಾಯಣ ರಾವ್ ಅಂತ್ಯಕ್ರಿಯೆ

ಬೀದರ್,ಸೆ.25- ನಿನ್ನೆ ನಿಧನರಾದ ಕಾಂಗ್ರೆಸ್ ಶಾಸಕ ಬಿ.ನಾರಾಯಣ ರಾವ್ ಅವರ ಅಂತ್ಯಕ್ರಿಯೆ ಇಂದು ಬಸವ ಕಲ್ಯಾಣದದ ಸಸ್ತಾಪುರ ಬಂಗ್ಲಾ ಸಮೀಪದ ಬೊಕ್ಕೆ ಲೇಔಟ್‍ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ನಟಿ ದೀಪಿಕಾರನ್ನು ರೋಲ್ ಮಾಡಲ್ ಆಗಿ ಅನುಸರಿಸಿರುವವರಿಗೆ...

 ಬಾಲಿವುಡ್ ಟಾಪ್ ನಟಿ ದೀಪಿಕಾ ಪಡುಕೋಣೆ ಹಾಗೂ ಅವರ ಮ್ಯಾನೇಜರ್ ಅವರಿಗೆ ಎನ್‍ಸಿಬಿ ಸಮನ್ಸ್ ನೀಡಿ ವಿಚಾರಣೆಗೆ ಆಹ್ವಾನಿಸಿದ ಹಿನ್ನೆಲೆ ಕನ್ನಡ ನಟಿ, ರಾಜಕಾರಣಿ ಮಾಳವಿಕಾ ಬೇಸರ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಒಂದೇ ದಿನ 23 ಹೊಸ ಪ್ರಕರಣ ಪತ್ತೆ : ಸೋಂಕಿತರ ಸಂಖ್ಯೆ 122ಕ್ಕೆ ಏರಿಕೆ

ಹಾಸನ : ಹಾಸನ ಜಿಲ್ಲೆಯಲ್ಲಿ ಹೊಸದಾಗಿ ಮತ್ತೆ 23 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ  ಕೊರೋನಾ ಸೋಂಕಿತರ ಸಂಖ್ಯೆ  122 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಸುದ್ಧಿಗೋಷ್ಠಿ ನಡೆಸಿದ ಅವರು ಇಂದು ವರದಿಯಾದ ಎಲ್ಲಾ ಪಾಸಿಟೀವ್ ಪ್ರಕರಣಗಳಿಗೆ ಮಹಾರಾಷ್ಟ್ರದಿಂದ ಆಗಮಿಸಿದ ಹಿನ್ನಲೆ ಹೊಂದಿದ್ದು, ಎಲ್ಲರೂ ಚನ್ನರಾಯಪಟ್ಟಣ ತಾಲ್ಲೂಕಿಗೆ ಸೇರಿದವರಾಗಿದ್ದಾರೆ. ಸೋಂಕು ಪತ್ತೆಯಾದ ಎಲ್ಲರನ್ನೂ ನಗರದ ಕೋವಿಡ್ ಆಸ್ಪತ್ರೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ದಾಖಲಾಗಿರುವ ಎಲ್ಲರೂ ಆರೋಗ್ಯಯುತವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ಇನ್ನು ಹೊಳೆನರಸೀಪುರದ ಪಿಎಸ್ ಐ ‌ಹಾಗೂ ಮೂವರು ಕಾನ್ ಸ್ಟೆಬಲ್, ಹಾಸನದ ಮೂ ವರು ಕೆಎಸ್ ಆರ್ ಪಿ ಪೊಲೀಸರಿಗೂ ಸೋಂಕು ‌ಧೃಡಪಟ್ಟಿದೆ.ಇದರಿಂದ ಪೊಲೀಸರು ಇದ್ದು‌ಹೊಳೆರಸೀಪುರಸ ಕೆಲವೊಂದು  ಏರಿಯಾಗಳನ್ನು ಸೀಲ್ ಡೌನ್ ಮಾಡಿ‌ ನಿರ್ಬಂದಿತ ವಲಯ ಎಂದು ಘೋಷಣೆ ‌ಮಾಡಲಾಗಿದೆ.‌ ಹಾಸನದಲ್ಲಿ  ಬಡಾವಣೆ‌ಜನರಿಗೆ ಪತ್ತೆಯಾಗುತ್ತಿರುವ ಕಾರಣ ಈಗಾಲೇ‌ಹಾಸನದ ಮೂರು ಬಡಾವಣೆಗಳನ್ನು ಕಂಟಮ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಹಾಸನದ ಉತ್ತರ ಬಡಾವಣೆ, ಸತ್ಯಮಂಗಲದ ಇಂದಿರಾ ಬಡಾವಣೆಗಳನ್ನು  ಈಗಾಗಲೇ ‌ಉತ್ತರ ಬಡಾವಣೆ‌ ಹಾಗೂ ವಿಶ್ವೇಶ್ವರಯ್ಯ ನಗರ ಗಳನ್ನು ಕಂಟೈನ್ ಮೆಂಟ್ ಏರಿಯಾ ಎಂದು ಘೋಷಿಸಲಾಗಿದೆ.

ಒಟ್ಟಾರೆ ಈವರಗೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 82 ಹೊಳೆನರಸೀಪುರ 20 ಆಲೂರು 3, ಹಾಸನ 13, ಅರಕಲಗೂಡು 3 ಹಾಗೂ ಅರಸೀಕೆರೆ ತಾಲ್ಲೂಕಿನಲ್ಲಿ 1 ಕೋರೋನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ವಿವರ ನೀಡಿದರು.

ನಗರದ ಉತ್ತರಬಡಾವಣೆ ಹಾಗೂ ಬಿ. ಕಾಟೀಹಳ್ಳಿ ಪ್ರದೇಶಗಳನ್ನು ನಿರ್ಬಂಧಿತ ವಲಯಗಳನ್ನಾಗಿ ಗುರುತಿಸಲಾಗಿದ್ದು, ಉತ್ತರ ಬಡಾವಣೆಯ ಸೋಂಕಿತರ ಸಂಪರ್ಕದಲ್ಲಿದ್ದ ಐವರು ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಎಲ್ಲವೂ ನೆಗೆಟೀವ್ ಎಂದು ವರದಿ ಬಂದಿದೆ. ಬಿ. ಕಾಟೀಹಳ್ಳಿಯಲ್ಲಿ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 21 ಜನರನ್ನು ಗುರುತಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. 17 ಮಂದಿಯ ವರದಿ ನೆಗೆಟೀವ್ ಬಂದಿದ್ದು, ನಾಲ್ವರ ವರದಿ ನಿರೀಕ್ಷಣೆಯಲ್ಲಿದೆ ಎಂದು ಹೇಳಿದರು. ಸರ್ಕಾರದ ಆದೇಶದಂತೆ ಕಂಟೈನ್‍ಮೆಂಟ್ ಪ್ರದೇಶಗಳಲ್ಲಿ 28 ದಿನಗಳವರೆಗೆ ನಿರ್ಬಂಧವನ್ನು ಮುಂದುವರೆಸಬೇಕು. ಈ ನಿಟ್ಟಿನಲ್ಲಿ ಆ ಪ್ರದೇಶದ ಜನರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಂಟೈನ್‍ಮೆಂಟ್ ಜೋನ್ ಆ್ಯಪ್ ಮೂಲಕ ನಿರ್ಬಂಧಿತ ಪ್ರದೇಶದ ಪ್ರತಿಯೊಂದು ಮನೆಗಳನ್ನು ಗುರುತಿಸಿ ಮನೆ ಮನೆ ಭೇಟಿ ನೀಡಿ ಪ್ರತಿನಿತ್ಯ ಅವರ ಆರೋಗ್ಯ ಲಕ್ಷಣಗಳ ವರದಿ ಪಡೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಮೇ.28 ರಂದು ಪಶ್ವಿಮ ಬಂಗಾಳಕ್ಕೆ ಹೋಗುವವರಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಅದರಲ್ಲಿ ಹಾಸನದಿಂದ ಸುಮಾರು 945 ಜನ ಹಾಗೂ ಕೊಡಗಿನಿಂದ ಸುಮಾರು 550 ಜನ ಪ್ರಯಾಣಿಸಲಿದ್ದಾರೆ ಎಂದು ಆರ್.ಗಿರೀಶ್ ತಿಳಿಸಿದರು. ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಲ್ಲಿ ಒಬ್ಬರಿಗೆ ನೆಗೆಟೀವ್ ವರದಿ ಬಂದಿದ್ದು, ಎರಡು ಬಾರಿ ಪರೀಕ್ಷೆ ನಡೆಸಿ ವರದಿ ಬಂದ ನಂತರ ಗುಣಮುಖರಾಗಿರುವುದನ್ನು ಖಾತರಿಪಡಿಸಿಕೊಂಡು ಬಿಡುಗಡೆ ಮಾಡಲಾಗುವುದು ಎಂದರು.

ಸಹಾಯವಾಣಿ ಸಂಪರ್ಕಿಸಲು ಸೂಚನೆ:

ಜಿಲ್ಲೆಗೆ ಹೊರರಾಜ್ಯಗಳಿಂದ ಬರುತ್ತಿರುವವರಿಂದಲೇ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿರುವುದರಿಂದ, ಯಾವುದೇ ರೀತಿಯ ಅನುಮತಿ ಇಲ್ಲದೆ ಯಾರಾದರೂ ಬಂದಿದ್ದರೆ, ಅಂತಹವರ ಬಗ್ಗೆ ಸಾರ್ವಜನಿಕರು ದೂರವಾಣಿ ಸಂಖ್ಯೆ 08172-2611 ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ ಅವರು ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಅನಗತ್ಯ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಲ್ಲದೇ, ಈಗಾಗಲೇ ಒಬ್ಬರ ಮೇಲೆ ಪ್ರಕರಣ ದಾಖಲಾಗಿದೆ ಎಂದರು.

TRENDING