ಕೊರೊನಾ ಹಾವಳಿ : ಮಹಾರಾಷ್ಟ್ರದಲ್ಲಿ ಇಂದು 2,287 ಕೇಸ್ ಪತ್ತೆ, 72,300ಕ್ಕೇರಿದ ಸೋಂಕಿತರ ಸಂಖ್ಯೆ

ಮುಂಬೈ, ಜೂನ್ 2: ದೇಶದ ಕೊರೊನಾ ಹಾಟ್‌ಸ್ಪಾಟ್‌ ಮಹಾರಾಷ್ಟ್ರದಲ್ಲಿ ಇಂದು 2,287 ಜನರಿಗೆ ಸೋಂಕು ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 72,300ಕ್ಕೆ ಏರಿಕೆಯಾಗಿದೆ.

1225 ಜನರು ಇಂದು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 31,333 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಇಂದು ಒಂದೇ ದಿನ 103 ಜನರು ಮೃತಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 2,465ಕ್ಕೆ ಜಿಗಿದಿದೆ.

ತಮಿಳುನಾಡಿನಲ್ಲಿಂದು 1,091 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯು 24,586ಕ್ಕೆ ಏರಿಕೆಯಾಗಿದೆ. 10680 ಕೇಸ್ ಸಕ್ರಿಯವಾಗಿದೆ. 13706 ಜನರು ಗುಣಮುಖರಾಗಿದ್ದಾರೆ.

ಕೇರಳದಲ್ಲಿ 86 ಮಂದಿಗೆ ಇಂದು ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 776ಕ್ಕೆ ಏರಿಕೆಯಾಗಿದೆ.

ಗುಜರಾತ್‌ನಲ್ಲಿಂದು 415 ಜನರಿಗೆ ಸೋಂಕು ಖಚಿತವಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 17,632ಕ್ಕೆ ಏರಿದೆ. ಇದುವರೆಗೂ ರಾಜ್ಯದಲ್ಲಿ 1092 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ರಾಜಸ್ಥಾನದಲ್ಲಿಂದು 273 ಜನರಿಗೆ ಕೊರೊನಾ ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9373ಕ್ಕೆ ಏರಿದೆ.

 

Share Post

Leave a Reply

Your email address will not be published. Required fields are marked *

error: Content is protected !!