ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿಪಡಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-1 9 ಸೋಂಕಿತ ರೋಗಿಗಳಿಗೆ ಚಿಕಿತ್ಸಾ ದರವನ್ನು ನಿಗದಿಗೊಳಿಸುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಖಾಸಗಿ ಆಸ್ಪತ್ರೆಗಳು ಅತಿಯಾದ ಶುಲ್ಕವನ್ನು ವಿಧಿಸುತ್ತಿವೆ. ಹೀಗಾಗಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿಗೊಳಿಸಬೇಕು. ನಗದು ರಹಿತ ಚಿಕಿತ್ಸಾ ಸೌಲಭ್ಯಗಳನ್ನು ವಿಮಾದಾರರಿಗೆ ವಿಸ್ತರಿಸುವುದರ ಸಂಬಂಧ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿ ಅವಿಶೇಕ್ ಗೋಯೆಂಕಾ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಕೇಂದ್ರಕ್ಕೆ ಸೂಚನೆ ನೀಡಿದ್ದು, ಒಂದು ವಾರದೊಳಗೆ ಪ್ರತ್ಯುತ್ತರ ನೀಡುವಂತೆ ತಿಳಿಸಿದೆ. ನ್ಯಾ. ಅಶೋಕ್ ಭೂಷಣ್, ನ್ಯಾ.​ ಎಂ.ಆರ್.​ ಶಾ ಹಾಗೂ ನ್ಯಾ.ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ​ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲಿಸಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರವರಿಗೆ ಕೇಂದ್ರದೊಂದಿಗೆ ಚರ್ಚಿಸಿ ಇನ್ನೊಂದು ವಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ. ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸರ್ಕಾರ ಅನುಮತಿ ನೀಡಿದ್ದು, ರೋಗಿಗಳಿಂದ ಅಧಿಕ ದರ ವಸೂಲಿ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ನ ಈ ನಿರ್ದೇಶನ ಮಹತ್ವದ್ದಾಗಿದೆ.

 

Share Post

Leave a Reply

error: Content is protected !!