Thursday, August 13, 2020
Home ಜಿಲ್ಲೆ ಶಿವಮೊಗ್ಗ ಕೊರೊನಾ ಸೋಂಕಿತ ಸ್ವಾಮೀಜಿಗೆ ಆಯುರ್ವೇದ ಚಿಕಿತ್ಸೆ ಕೊಡಿಸಲು ಮುಂದಾದ ಶಿವಮೊಗ್ಗ ಜಿಲ್ಲಾಡಳಿತ

ಇದೀಗ ಬಂದ ಸುದ್ದಿ

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಸರ್ಕಾರಿ ಆಸ್ಪತ್ರೆಗೆ ನೀರಿನ ಫಿಲ್ಟರ್ ಕೊಡುಗೆ ಕೊಟ್ಟ...

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ರೀತಿಯ ಸವಲತ್ತುಗಳು ಸಿಗುವಹಾಗೆ ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

ಸುಶಾಂತ್ ಸಿಂಗ್ ಪ್ರಕರಣ : ಅತಿ ದೊಡ್ಡ...

ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ ಪೂತ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸುಶಾಂತ್ ಸಿಂಗ್ ರದ್ದು ಆತ್ಮಹತ್ಯೆ ಅಲ್ಲ, ಹತ್ಯೆ ಎಂಬ ವಾದ ಸೋಷಿಯಲ್ ಮೀಡಿಯಾದಲ್ಲಿ ಜೋರಾಗುತ್ತಿದೆ....

ಬೆಟ್ಟದ ಬಂಡೆಯಲ್ಲಿದೆ ಸಲಗದ ಸೊಂಡಿಲು

ಇಡೀ ಜಗತ್ತು ಆಗಸ್ಟ್ 12ನ್ನು ವಿಶ್ವ ಆನೆಗಳ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿದೆ. ಕಾಡಾನೆಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ. ಇದರ ಹಿನ್ನೆಲೆಯಲ್ಲಿ ನೆಟ್ಟಿಗರು...

‘ಹತ್ತು ದಿನ ಯಾರೂ ನನ್ನ ಭೇಟಿಗೆ ಬರಬೇಡಿ’:...

 ಬೆಂಗಳೂರು, ಆ. 13: ನಿನ್ನೆಯಷ್ಟೇ ತಮ್ಮ 73ನೇ ವಸಂತಕ್ಕೆ ಕಾಲಿಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಮುಂದಿನ ಹತ್ತು...

ಕೊರೊನಾ ಸೋಂಕಿತ ಸ್ವಾಮೀಜಿಗೆ ಆಯುರ್ವೇದ ಚಿಕಿತ್ಸೆ ಕೊಡಿಸಲು ಮುಂದಾದ ಶಿವಮೊಗ್ಗ ಜಿಲ್ಲಾಡಳಿತ

ಶಿವಮೊಗ್ಗ, ಜೂನ್ 17: ತಮಗೆ ಆಯುರ್ವೇದ ಚಿಕಿತ್ಸೆ ಕೊಡಿಸಬೇಕೆಂದು ಈಚೆಗೆ ಮನವಿ ಮಾಡಿದ್ದ ಕೊರೊನಾ ಸೋಂಕಿತ ಸ್ವಾಮೀಜಿಯೊಬ್ಬರಿಗೆ ಸ್ಪಂದಿಸಿರುವ ಶಿವಮೊಗ್ಗ ಜಿಲ್ಲಾಡಳಿತ, ಆಯುಷ್ ಇಲಾಖೆ ಆರೋಗ್ಯ ಮಂತ್ರಾಲಯ ಸಲಹೆ ಪಡೆದು ಅಧಿಕೃತವಾಗಿ ಸ್ವಾಮೀಜಿಗೆ ಆಯುರ್ವೇದ ಚಿಕಿತ್ಸೆ ಕೊಡಿಸಲು ಮುಂದಾಗಿದೆ.

ಈ ಕುರಿತು ಸ್ವಾಮೀಜಿ ಅವರು ಮಾಧ್ಯಮ ಪ್ರಕಟಣೆ ನೀಡಿದ್ದಾರೆ. “ನನ್ನ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿ, ನನಗೆ ಆಯುರ್ವೇದ ಚಿಕಿತ್ಸೆ ಪಡೆಯಲು ಅವಕಾಶ ನೀಡಿದೆ. ನಾಲ್ಕೈದು ದಿನಗಳ ಹಿಂದೆಯೇ ಆಯುರ್ವೇದ ಚಿಕಿತ್ಸೆ ಕೊಡಿಸುವಂತೆ ಪ್ರಧಾನ ಮಂತ್ರಿ, ಮುಖ್ಯಮಂತ್ರಿಗಳಾದಿಯಾಗಿ ಜಿಲ್ಲಾಡಳಿತಕ್ಕೂ ಮನವಿ ಸಲ್ಲಿಸಿದ್ದೆ. ಈ ಮನವಿಯನ್ನು ಪುರಸ್ಕರಿಸಲು ಕಾನೂನು ತೊಡಕುಗಳ ಕಾರಣ ಜಿಲ್ಲಾಡಳಿತ ಹಿಂದೇಟು ಹಾಕಿತ್ತು. ಇದೀಗ ಆಯುರ್ವೇದ ಚಿಕಿತ್ಸೆ ಆರಂಭಿಸಲು ಅನುಮತಿ ನೀಡಿದೆ” ಎಂದು ತಿಳಿಸಿದ್ದಾರೆ.

ಜಿಲ್ಲಾ ಆಯುಷ್ ಅಧಿಕಾರಿ ಡಾ. ಎ.ಎಸ್.ಪುಷ್ಪ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಅವರ ಸೂಚನೆ ಮೇರೆಗೆ ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಆಯುಷ್ ಇಲಾಖೆಯಲ್ಲಿ ಹಿರಿಯ ವೈದ್ಯಾಧಿಕಾರಿ ಡಾ.ಸಿ.ಎ.ಹಿರೇಮಠ ಅವರು ಇಂದು ತಪಾಸಣೆ ಮಾಡಿ ಆಯುರ್ವೇದ ಚಿಕಿತ್ಸೆ ನೀಡಲು ಆರಂಭಿಸಿದ್ದಾರೆ.

“ನಮ್ಮ ದೇಶದ ಸನಾತನ ಪರಂಪರೆಯಲ್ಲಿ ಬಂದಿರುವ, ಮಹರ್ಷಿ ಪ್ರಣೀತ ಆಯುರ್ವೇದ ಚಿಕಿತ್ಸೆಗೆ ಅನುವು ಮಾಡಿಕೊಟ್ಟಿದೆ. ರಾಜ್ಯದಲ್ಲಿ ಇದೇ ಮೊದಲು ಕೊರೊನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆಗೆ ಮುಂದಾಗಿದ್ದು ಸಂತಸದ ವಿಷಯವಾಗಿದೆ” ಎಂದು ಸ್ವಾಮೀಜಿ ತಿಳಿಸಿದ್ದಾರೆ.

TRENDING