Thursday, August 13, 2020
Home ಜಿಲ್ಲೆ ಶಿವಮೊಗ್ಗ ಶಿವಮೊಗ್ಗದ ಮಾರವಳ್ಳಿಯಲ್ಲಿ 4ನೇ ಶತಮಾನದ ಕದಂಬರ ಕಾಲದ ನರಸಿಂಹ ಶಿಲ್ಪ ಪತ್ತೆ

ಇದೀಗ ಬಂದ ಸುದ್ದಿ

ಕೊರೊನಾ ಸೋಂಕಿತನ ಶವವನ್ನು ಕಚ್ಚಿ ತಿಂದ ನಾಯಿಗಳು

ಇಲ್ಲಿಯ ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಬಳಿ ಇರುವ ನಿರಾಶ್ರಿತರ ಕೇಂದ್ರದಲ್ಲಿ ವ್ಯಕ್ತಿಯೊಬ್ಬನ ಮೃತದೇಹವನ್ನು ನಾಯಿಗಳು ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ನಡೆದಿದೆ.

ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್...

ಆಯೋಧ್ಯೆಯಲ್ಲಿ ಆ. 5ರಂದು ನಡೆದಿದ್ದ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದ 'ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ' ಮುಖ್ಯಸ್ಥ ಮಹಾಂತ...

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಸರ್ಕಾರಿ ಆಸ್ಪತ್ರೆಗೆ ನೀರಿನ ಫಿಲ್ಟರ್ ಕೊಡುಗೆ ಕೊಟ್ಟ...

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ರೀತಿಯ ಸವಲತ್ತುಗಳು ಸಿಗುವಹಾಗೆ ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

ಸುಶಾಂತ್ ಸಿಂಗ್ ಪ್ರಕರಣ : ಅತಿ ದೊಡ್ಡ...

ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ ಪೂತ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸುಶಾಂತ್ ಸಿಂಗ್ ರದ್ದು ಆತ್ಮಹತ್ಯೆ ಅಲ್ಲ, ಹತ್ಯೆ ಎಂಬ ವಾದ ಸೋಷಿಯಲ್ ಮೀಡಿಯಾದಲ್ಲಿ ಜೋರಾಗುತ್ತಿದೆ....

ಶಿವಮೊಗ್ಗದ ಮಾರವಳ್ಳಿಯಲ್ಲಿ 4ನೇ ಶತಮಾನದ ಕದಂಬರ ಕಾಲದ ನರಸಿಂಹ ಶಿಲ್ಪ ಪತ್ತೆ

ಶಿವಮೊಗ್ಗ, ಜೂನ್ 20: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಮಾರವಳ್ಳಿ ಗ್ರಾಮದ ಬೆಟ್ಟದ ಮೇಲೆ ಹುಲಿಸಿದ್ದೇಶ್ವರ ದೇವರು ಎಂದು ಸ್ಥಳೀಯರು ಕರೆಯುವ ನರಸಿಂಹ ಶಿಲ್ಪವು ಪತ್ತೆಯಾಗಿದೆ. ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಶೇಜೇಶ್ವರ ಅವರು ಕ್ಷೇತ್ರಕಾರ್ಯ ಕೈಗೊಂಡ ಸಂದರ್ಭ ಈ ಶಿಲ್ಪ ಪತ್ತೆಯಾಗಿದೆ.

ಸುಮಾರು ಎರಡು ಅಡಿ ಎತ್ತರ, ಒಂದು ಅಡಿ ಅಗಲ ಹಾಗೂ ನಾಲ್ಕು ಅಡಿ ಸುತ್ತಳತೆಯನ್ನು ಈ ಶಿಲ್ಪ ಹೊಂದಿದೆ. ಮುಂಗಾಲು ಹಾಗೂ ಹಿಂಗಾಲನ್ನು ಊರಿ ಕುಳಿತಿರುವಂತಿರುವ ಈ ಶಿಲ್ಪಕ್ಕೆ ಎರಡೆರಡು ಕೊರೆ ಹಲ್ಲುಗಳ ಕೆತ್ತನೆಯಿದೆ. ಶಿಲ್ಪವು ಮೀಸೆ ಹೊಂದಿದ್ದು, ಕಣ್ಣು ಹಾಗೂ ಮೂಗು ಉಬ್ಬಿದಂತಿವೆ. ಈ ಶಿಲ್ಪಕ್ಕೆ ಈಚೆಗೆ ಕಾಡುಗಲ್ಲುಗಳಿಂದ ಚಿಕ್ಕ ದೇವಾಲಯ ನಿರ್ಮಾಣ ಮಾಡಲಾಗಿದೆ.

ಈ ಶಿಲ್ಪವು ಕ್ರಿ.ಶ. 3 ಮತ್ತು 4ನೇ ಶತಮಾನದ ಕದಂಬರ ಕಾಲದ ಶಿಲ್ಪ ಎಂದು ಅಂದಾಜಿಸಲಾಗಿದೆ. ಮಳವಳ್ಳಿಯ ಶಿವಸ್ಕಂದ ವರ್ಮನ ಶಾಸನದಲ್ಲಿ ನರಸಿಂಹ ಶಿಲ್ಪ ದೊರೆತಿರುವ ಸ್ಥಳದಿಂದ ಎರಡು ಕಿ.ಮೀ ಅಂತರದಲ್ಲಿ ಇರುವ ಮತ್ತಿ ಕೋಟೆಯನ್ನು ಮರಿಯಾಸ ಎಂದು ಕರೆಯಲಾಗಿದೆ ಎಂಬ ಮಾಹಿತಿ ಇದೆ.

ಈಗ ಇದನ್ನು ಮತ್ತಿಕಟ್ಟೆ ಎಂದು ಕರೆಯಲಾಗಿದ್ದು, ಈ ಶಿಲ್ಪವು ಅದರ ಸಮೀಪವೇ ದೊರೆತಿರುವುದರಿಂದ ಈ ಸ್ಥಳವು ಕದಂಬರ ಕಾಲದ್ದೆಂದು ಅಂದಾಜಿಸಲಾಗಿದೆ. ಈ ಬೆಟ್ಟವು ಅರಣ್ಯ ಪ್ರದೇಶವಾಗಿದ್ದರಿಂದ, ಜೊತೆಗೆ ಪಶ್ಚಿಮ ಘಟ್ಟದಲ್ಲಿ ಹುಲಿಗಳು ಹೆಚ್ಚಾಗಿರುವುದರಿಂದ ಹುಲಿ ಮುಖದ ನರಸಿಂಹ ಶಿಲ್ಪಗಳ ಆರಾಧನೆ ಇರಬಹುದು, ಇದು ಪ್ರಕೃತಿ ದೇವತೆಯ ಸಂರಕ್ಷಣೆ ಹಾಗೂ ಗೋವು -ಮಾನವರ ಸಂರಕ್ಷಣೆಯ ಸಂಕೇತವೆನ್ನಬಹುದು ಎನ್ನುವುದು ಶೇಜೇಶ್ವರ ಅವರ ಅಭಿಪ್ರಾಯ.

TRENDING