ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ; ಮತ್ತೆ ಚರ್ಚೆ ಆರಂಭ!

ಬೆಂಗಳೂರು, ಜೂನ್ 21 : ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲಾ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ, ಇವರಲ್ಲಿ ನಾಲ್ವರು ಬಿಜೆಪಿಯವರು. ಈಗ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆರಂಭವಾಗಿದೆ.

ವಿಧಾನ ಪರಿಷತ್ ಸದಸ್ಯರಾಗಲಿವರುವ ಎಂಟಿಬಿ ನಾಗರಾಜ್, ಆರ್. ಶಂಕರ್ ಯಡಿಯೂರಪ್ಪ ಸಂಪುಟ ಸೇರಲಿದ್ದಾರೆಯೇ? ಎಂಬುದು ಪ್ರಶ್ನೆ. ಸಂಪುಟದಲ್ಲಿ ಸದ್ಯ 5 ಸಚಿವ ಸ್ಥಾನಗಳು ಖಾಲಿ ಇವೆ. ಬಿಜೆಪಿಯ ಕೆಲವು ಶಾಸಕರು ಆಕಾಂಕ್ಷಿಗಳು ಎಂಬುದು ಗುಟ್ಟಾಗಿ ಉಳಿದಿಲ್ಲ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಸಚಿವ ಸ್ಥಾನವನ್ನು ಬಿಟ್ಟು ಬಂದ ಇಬ್ಬರೂ ನಾಯಕರಿಗೆ ಈಗ ಸಚಿವ ಸ್ಥಾನ ನೀಡಬೇಕು ಎಂಬ ಮಾತಿದೆ. ಆದರೆ, ಕುರುಬ ಸಮುದಾಯಕ್ಕೆ ಸೇರಿದ ಇಬ್ಬರು ಈಗಾಗಲೇ ಯಡಿಯೂರಪ್ಪ ಸಂಪುಟದಲ್ಲಿದ್ದಾರೆ.

ಸರ್ಕಾರ ಬಂದು ವರ್ಷವಾದಾಗ ಸಚಿವರ ಕಾರ್ಯ ವೈಖರಿ ಆಧಾರದಲ್ಲಿ ಕೆಲವರನ್ನು ಕೈ ಬಿಟ್ಟು, ಹೊಸಬರಿಗೆ ಅವಕಾಶ ನೀಡುವ ಬಗ್ಗೆಯೂ ಪಕ್ಷದ ವಲಯದಲ್ಲಿ ಚರ್ಚೆ ನಡೆದಿತ್ತು. ಆದರೆ, ಕುರುಬ ಸಮುದಾಯಕ್ಕೆ ಸೇರಿದ ಇಬ್ಬರು ಈಗಾಗಲೇ ಯಡಿಯೂರಪ್ಪ ಸಂಪುಟದಲ್ಲಿದ್ದಾರೆ.

ಸರ್ಕಾರ ಬಂದು ವರ್ಷವಾದಾಗ ಸಚಿವರ ಕಾರ್ಯ ವೈಖರಿ ಆಧಾರದಲ್ಲಿ ಕೆಲವರನ್ನು ಕೈ ಬಿಟ್ಟು, ಹೊಸಬರಿಗೆ ಅವಕಾಶ ನೀಡುವ ಬಗ್ಗೆಯೂ ಪಕ್ಷದ ವಲಯದಲ್ಲಿ ಚರ್ಚೆ ನಡೆದಿತ್ತು. ಈಗ ಈ ಚರ್ಚೆ ಮತ್ತೆ ಆರಂಭವಾಗುವ ಸಾಧ್ಯತೆ ಇದೆ.

 

Share Post

Leave a Reply

Your email address will not be published. Required fields are marked *

error: Content is protected !!