ಇಂಧನ ಬೆಲೆ ಏರಿಕೆ ಖಂಡಿಸಿ ನಾಳೆ ರಾಷ್ಟ್ರವ್ಯಾಪಿ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ,ಜೂ.28- ಡೀಸೆಲ್, ಪೆಟ್ರೋಲ್ ಬೆಲೆಯನ್ನು ನಿರಂತರ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಳೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಬೆಲೆ ಹಿಂಪಡೆಯಬೇಕೆಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಸಲ್ಲಿಸಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು,

ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಅವೈಜ್ಞಾನಿಕ ಹಾಗೂ ಅಪ್ರಸ್ತುತದಿಂದ ಕೂಡಿದೆ. ಇಂಧನ ದರ ಏರಿಸುವ ಮೂಲಕ ಸರ್ಕಾರ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದೆ. ಈ ವಿರುದ್ಧ ಪಕ್ಷ ಹೋರಾಟ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ.

ನಾಳೆಯಿಂದ ಜು.4ರವರೆಗೆ ತಾಲ್ಲೂಕು, ಬ್ಲಾಕ್ ಮಟ್ಟಗಳಲ್ಲೂ ಪಕ್ಷ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಸತತ 21 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗಿದೆ.

ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳಿಂದ ಸಾಮಾನ್ಯ ಜನರ ಮೇಲೆ ಹೇರಲಾಗಿರುವ ಭಾರವನ್ನು ಇಳಿಸಲು ಪ್ರಯತ್ನ ಮಾಡುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ರೈತರು, ಸ್ಪೀಕ್ ಅಪ್ ಆನ್ ಪೆಟ್ರೋಲ್ ,ಡೀಸೆಲ್ ಹೈಕ್ ಎಂಬ ಅಭಿಯಾನವನ್ನು ಕಾಂಗ್ರೆಸ್ ನಡೆಸುತ್ತಿದ್ದು, ದರ ಏರಿಕೆಯಿಂದ ಟ್ಯಾಕ್ಸಿ ಮತ್ತು ಬಸ್ ಮಾಲೀಕರು, ಸಾರಿಗೆದಾರರು, ಓಲಾ / ಉಬರ್ ಚಾಲಕರು, ಕಾರ್ಮಿಕರು ಮತ್ತು ಸಾಮಾನ್ಯ ಜನರ ಅವಸ್ಥೆಗಳನ್ನು ಎತ್ತಿ ಹಿಡಿಯಲಿದೆ ಎಂದು ಹೇಳಿದ್ದಾರೆ.

ಸ್ಪೀಕ್ ಅಪ್ ಆನ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಎಂಬ ಸಾಮಾಜಿಕ ಮಾಧ್ಯಮ ಅಭಿಯಾನವನ್ನು ಕಾಂಗ್ರೆಸ್ ನಡೆಸಲಿದೆ. ಅಂತಹ ಹೆಚ್ಚಳದ ಪರಿಣಾಮ ವೇಣುಗೋಪಾಲ್ ತಿಳಿಸಿದ್ದಾರೆ.

 

Share Post

Leave a Reply

Your email address will not be published. Required fields are marked *

error: Content is protected !!