ಬೇರೆ ರಾಜ್ಯಗಳಿಗೆ ಹೊಲಿಸಿದರೇ ನಮ್ಮಲ್ಲಿ ಕೊರೋನಾ ಕಡಿಮೆಯಿದೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೋವಿಡ್ ನಿಯಂತ್ರಣ ಮಾಡುವಲ್ಲಿ ಕರ್ನಾಟಕ ಸರ್ಕಾರ ಮುಂದಿದೆ. ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಮುಂದಿನ ದಿನಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗದಂತೆ ಕ್ರಮ ಅನುಸರಿಸಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಬೆಂಗಳೂರಲ್ಲಿ ಬೇರೆ ರಾಜ್ಯಗಳ ರಾಜಧಾನಿಗಳಿಗಿಂತ ಕೊರೋನಾ ಕಡಿಮೆ ಆಗಿದೆ. ಸರ್ಕಾರದ ಪರಿಶ್ರಮದಿಂದ ಕೋವಿಡ್ ಕಡಿಮೆಯಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಂಕಿ- ಅಂಶಗಳ ಸಮೇತ ವಿವರಿಸಿದರು.

ದೆಹಲಿ, ಚೆನ್ನೈ, ಕೊಲ್ಕತ್ತಾ, ಮುಂಬೈಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ನಾವು ಶಕ್ತಿ ಮೀರಿ‌ ಕೊರೋನಾ ಹಬ್ಬದಂತೆ ತಡೆದಿದ್ದೇವೆ. ಮನೆ ಮನೆಗೆ ತೆರಳಿ‌ ಕುಟುಂಬ ಸದಸ್ಯರ ಆರೋಗ್ಯ ಬಗ್ಗೆ ವಿಚಾರಣೆ ಮಾಡುತ್ತಿದ್ದೇವೆ. ಇಲ್ಲಿ ಶಂಕಿತರು ಕಂಡುಬಂದರೆ ಪರೀಕ್ಷೆ ಮಾಡುತ್ತೇವೆ ಎಂದು ಹೇಳಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್​ 19ಗೆ ಚಿಕಿತ್ಸೆ ನೀಡುವ ಸಂಬಂಧ ಖಾಸಗಿ ಆಸ್ಪತ್ರೆಗಳ ಮಾಲೀಕರು, ವ್ಯವಸ್ಥಾಪಕರೊಂದಿಗೆ ಚರ್ಚಿಸಿದ್ದು ನಮ್ಮ ಸಂಪುಟ ಸಹೋದ್ಯೋಗಿಗಳು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!