ಯಡಿಯೂರಪ್ಪನವರೇ ಇದು ಅನ್ಯಾಯ ಅಲ್ಲವೇ.?: ಮಾಜಿ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಕೊರೋನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ್ಯ, ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರ ಆರೋಪಗಳಿವೆ. ರಾಜಕೀಯ ಪ್ರಭಾವ ಬಳಸಿ ಬಲವಿದವರು ಬದುಕಿಕೊಳ್ಳುತ್ತಾರೆ. ಬಡವರು ಧಿಕ್ಕಿಲ್ಲದಂತ ಸ್ಥಿತಿ. ಸಿಎಂ ಯಡಿಯೂರಪ್ಪ ಅವರೇ ಈ ಕಡೆ ಗಮನ ಹರಿಸಿ. ಸೋಂಕಿತರಿಗೆ ನೀಡುತ್ತಿರುವ ಔಷಧಿ, ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೇ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ. ಯಡಿಯೂರಪ್ಪನವರೇ ಇದು ಅನ್ಯಾಯ ಅಲ್ಲವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನು ಬದ್ಧ ಹಕ್ಕಿದೆ. ಸೋಂಕಿತರಿಗೆ ನೀಡುತ್ತಿರುವ ಔಷಧಿ, ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ. ಯಡಿಯೂರಪ್ಪನವರೇ ಇದು ಅನ್ಯಾಯ ಅಲ್ಲವೇ.? ಎಂಬುದಾಗಿ ಪ್ರಶ್ನೆ ಮಾಡಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಅವಕಾಶ ಸ್ವಾಗತಾರ್ಹ‌ ಕ್ರಮ. ಚಿಕಿತ್ಸಾ ಶುಲ್ಕ ಕಡಿಮೆ ಮಾಡಲು ಒಪ್ಪಿರುವ ಖಾಸಗಿಯವರು ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ನಿಗಾ ಇಡಬೇಕು. ಸೋಂಕಿತರಿಗೆ, ನೀಡುತ್ತಿರುವ ಔಷಧಿ ಮತ್ತು ಅನುಸರಿಸಲಾಗುತ್ತಿರುವ ಚಿಕಿತ್ಸಾ ವಿಧಾನದ ಸಂಪೂರ್ಣ ಮಾಹಿತಿಯನ್ನು ಮೊದಲೇ ನೀಡಬೇಕು ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

 

ದಿ ನ್ಯೂಸ್ 24 ಕನ್ನಡ

Share Post

Leave a Reply

Your email address will not be published. Required fields are marked *

error: Content is protected !!