Friday, August 14, 2020
Home ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ಒಟ್ಟು 13 ಜನರಿಗೆ ಕೊರೊನಾ ಸೋಂಕು ಪತ್ತೆ..!

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಒಟ್ಟು 13 ಜನರಿಗೆ ಕೊರೊನಾ ಸೋಂಕು ಪತ್ತೆ..!

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ 13 ಜನರಲ್ಲಿ, ಹೊಸಕೋಟೆ ತಾಲ್ಲೂಕಿನ 09 ಜನರಲ್ಲಿ ಹಾಗೂ ದೇವನಹಳ್ಳಿ ತಾಲ್ಲೂಕಿನ 07 ಜನರಲ್ಲಿ ಸೇರಿದಂತೆ ಒಟ್ಟು 29 ಜನರಲ್ಲಿ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ  ತಾಲ್ಲೂಕಿನ ಪಿ-15433, ಪಿ-15434, ಪಿ-15435, ಪಿ-15437, ಪಿ-15438, ಪಿ-15439, ಪಿ-15440, ಏಳು ವ್ಯಕ್ತಿಗಳು ಇನ್‌ ಫ್ಲೂಯೆನ್ಜಾ ಲೈಕ್‌  ಇಲ್ನೆಸ್‌ (ಐಎಲ್‌ ಐ) ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ, ಪಿ-15436 ಓರ್ವ ವ್ಯಕ್ತಿಯು ತೀವ್ರ ಉಸಿರಾಟದ ತೊಂದರೆಯಿಂದ ‌ಬಳಲುತ್ತಿದ್ದ ಹಿನ್ನೆಲೆ, ಪಿ-15442, ಪಿ-15443, ಪಿ-15444, ಮೂರು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11165) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ ಹಾಗೂ ಪಿ-15452 ಓರ್ವ ವ್ಯಕ್ತಿಯು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11992) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಕೋವಿಡ್-19 ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಪಿ-15441 ಓರ್ವ ವ್ಯಕ್ತಿಯ ಕೊರೊನಾ ಸೋಂಕಿನ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದಿದ್ದಾರೆ. ಆರೋಗ್ಯ ಇಲಾಖೆ ಸೋಂಕಿನ  ಕುರಿತಾದ ವರದಿ ಬರುವ ಮುನ್ನವೇ, ತೀವ್ರ ನಿಗಾವಹಿಸಲಾಗಿದ್ದ ಕೊರೊನಾ ಲಕ್ಷಣಗಳು ಕಂಡುಬಂದವರನ್ನು ಮಂಗಳವಾರವೇ ಚಿಕಿತ್ಸೆಗೆ ಕರೆದೊಯ್ದ ಕಾರಣ ನಗರದ ವಿನಾಯಕನಗರ, ಚಿಕ್ಕಪೇಟೆ, ಸ್ನೇಹಲೋಕ ಎಲೆಕ್ಟ್ರಾನಿಕ್  ಹಿಂಬಾಗದ ವಸತಿ ಪ್ರದೇಶ ರಸ್ತೆ, ಕಲ್ಲುಪೇಟೆ, ದೇಶದ ಪೇಟೆ ರಾಜೀವ್ ಗಾಂಧಿ ಕಾಲೋನಿಯನ್ನು ನಗರಸಭೆವತಿಯಿಂದ ಸೀಲ್ ಡೌನ್ ಮಾಡಲಾಗಿದೆ.

ಪುರುಷೋತ್ತಮ

ದಿ ನ್ಯೂಸ್ 24 ಕನ್ನಡ, ದೊಡ್ಡಬಳ್ಳಾಪುರ

TRENDING