Monday, August 10, 2020
Home ಅಂತರ್ ರಾಜ್ಯ ಕೊರೊನಾ ಹರಡುವ ಭೀತಿ : ತಾಜ್‌ಮಹಲ್ ಸೇರಿ ಇತರೆ ಐತಿಹಾಸಿಕ ಸ್ಮಾರಕಗಳು ಸಧ್ಯಕ್ಕೆ ತೆರೆಯೊಲ್ಲ

LATEST TRENDING

ಕಾರ್ಮಿಕ ಸಂಘಟನೆಗಳಿಂದ ‘ಭಾರತ ರಕ್ಷಿಸಿ’ ಹೋರಾಟ

ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾನೂನು ರದ್ದು ಮಾಡಿರುವ ಕೇಂದ್ರ ಸರ್ಕಾರ ಕೃಷಿ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ಸುಮಾರು 200ಕ್ಕೂ ಹೆಚ್ಚು ಸಂಘಟನೆಗಳು...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ ಎಂದು ವರದಿಯಾಗಿದೆ. ತನಗೆ ಕೋವಿಡ್ ದೃಢವಾದ ಬಗ್ಗೆ ಸ್ವತಃ ಪ್ರಣಬ್ ಮುಖರ್ಜಿ ಅವರು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಅಥಣಿ ಪಟ್ಟಣದಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಮ್...

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕೃಷಿ ಇಲಾಖೆಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಡಿಸಿ ಎಮ್ ಲಕ್ಷ್ಮಣ ಸವದಿಎಪಿ ಎಮ್ ಸಿ ಕಾಯ್ದೆಯ ತಿದ್ದುಪಡಿ ಯಾರಿಗೂ ಮಾರಕವಲ್ಲ...

ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನಲೆ ಶ್ರದ್ಧಾಂಜಲಿ

ಕಲಬುರಗಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನೆಲೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ...

ಕಲಬುರಗಿ: ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ತೊಲಗಲು ಆಗ್ರಹಿಸಿ ಪ್ರಾಂತ ರೈತ ಸಂಘ, ಸಿಐಟಿಯು , ಜೆಸಿಟಿಯು, ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಮತ್ತಿತರರ ಸಂಘಟನೆಗಳ ನೇತೃತ್ವದಲ್ಲಿ ಇಂದು...

ಕೊರೊನಾ ಹರಡುವ ಭೀತಿ : ತಾಜ್‌ಮಹಲ್ ಸೇರಿ ಇತರೆ ಐತಿಹಾಸಿಕ ಸ್ಮಾರಕಗಳು ಸಧ್ಯಕ್ಕೆ ತೆರೆಯೊಲ್ಲ

ಆಗ್ರಾ, ಜುಲೈ 6: ಆಗ್ರಾದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ತಾಜ್‌ಮಹಲ್ ಸೇರಿದಂತೆ ಇತರೆ ಐತಿಹಾಸಿಕ ಸ್ಮಾರಕಗಳನ್ನು ಸಧ್ಯಕ್ಕೆ ತೆರೆಯದೇ ಇರಲು ನಿರ್ಧರಿಸಲಾಗಿದೆ.

ತಾಜ್‌ಮಹಲ್, ಆಗ್ರಾ ಬಂದರು, ಅಕ್ಬರ್ ಟೋಂಬ್ ಇತರೆ ಐತಿಹಾಸಿಕ ಸ್ಮಾರಕಗಳನ್ನು ತೆರೆಯುವಂತಿಲ್ಲ ಎಂದು ಆಗ್ರಾ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಪ್ರಭು ಎನ್‌ ಸಿಂಗ್ ತಿಳಿಸಿದ್ದಾರೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಮಾಹಿತಿ ಪ್ರಕಾರ ಕಳೆದ ನಾಲ್ಕು ದಿನಗಳಲ್ಲಿ 55 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. 71 ಕಂಟೈನ್ಮೆಂಟ್ ಝೋನ್‌ಗಳಿವೆ. ಒಂದೊಮ್ಮೆ ಪ್ರವಾಸಿಗರಿಗೆ ಈ ಸ್ಥಳಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಿದರೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ ಎಂದಿದ್ದಾರೆ.

ಒಂದೊಮ್ಮೆ ಈ ತಾಣಗಳನ್ನು ತೆರೆದರೆ ಪ್ರವಾಸಿಗರು ಬಂದೇ ಬರುತ್ತಾರೆ. ಕೊವಿಡ್ ಲಾಕ್‌ಡೌನ್‌ ಸಡಿಲಗೊಂಡ ಬಳಿಕ ಜುಲೈ 6 ರಿಂದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಬೇಕಾದರೆ ತಾಜ್‌ಮಹಲ್ ತೆರೆಯಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ತಿಳಿಸಿದ್ದರು.

ಭಾರತದಲ್ಲಿ ಜುಲೈ 5 ರಂದು ಒಂದೇ ದಿನ 24 ಸಾವಿರ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿತ್ತು.ಶನಿವಾರ ಬೆಳಗ್ಗೆ 8ಗಂಟೆಯಿಂದ ಭಾನುವಾರ ಬೆಳಗ್ಗೆ ತನಕ ಭಾರತದಲ್ಲಿ 24,850 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. 613 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 6,73,105ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 19,268ಕ್ಕೆ ಏರಿಕೆಯಾಗಿದೆ. ಇದುವರೆಗೂ 4,09,083 ಜನರು ಗುಣಮುಖರಾಗಿದ್ದಾರೆ. ಕಳೆದ 9 ದಿನಗಳಿಂದ ದೇಶದಲ್ಲಿ ಪ್ರತಿದಿನ 18,000ಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ.

ಶನಿವಾರ ನವದೆಹಲಿಯಲ್ಲಿ 2,505 ಹೊಸ ಪ್ರಕರಣಗಳು ದಾಖಲಾಗಿವೆ. ರಾಷ್ಟ್ರ ರಾಜಧಾನಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 97,000ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 3004.

TRENDING