Thursday, August 13, 2020
Home ಜಿಲ್ಲೆ ಕಲಬುರ್ಗಿ ಕೊರೊನಾ ವೈರಸ್ ಹಿನ್ನೆಲೆ : ಮದುವೆ ಕುರಿತು ಹೊಸ ಆದೇಶ ಹೊರಡಿಸಿದ ಕಲಬುರಗಿ ಜಿಲ್ಲಾಡಳಿತ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೊರೊನಾ ವೈರಸ್ ಹಿನ್ನೆಲೆ : ಮದುವೆ ಕುರಿತು ಹೊಸ ಆದೇಶ ಹೊರಡಿಸಿದ ಕಲಬುರಗಿ ಜಿಲ್ಲಾಡಳಿತ

ಕಲಬುರಗಿ, ಜುಲೈ 8: ಕೊರೊನಾ ವೈರಸ್ ಹಿನ್ನೆಲೆ ಅದ್ಧೂರಿ ವಿವಾಹಕ್ಕೆ ಸರ್ಕಾರ ಅನುಮತಿ ನೀಡಿಲ್ಲ. ಆದರೆ, ಸರಳ ವಿವಾಹಕ್ಕೆ ಅವಕಾಶ ನೀಡಲಾಗಿತ್ತು. ಆದ್ರೀಗ, ಕಲಬುರಗಿ ಜಿಲ್ಲೆಯಲ್ಲಿ ಸರಳ ವಿವಾಹವೂ ಮಾಡುವಂತಿಲ್ಲ. ಈ ಕುರಿತು ಜಿಲ್ಲಾಡಳಿತ ಹೊಸದಾಗಿ ಆದೇಶ ಹೊರಡಿಸಿದೆ.

ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನರು ಭಾಗವಹಿಸುತ್ತಿದ್ದಾರೆ. ಸಮಾರಂಭದಲ್ಲಿ ಪಾಲ್ಗೊಂಡವರಲ್ಲಿ ಸೋಂಕು ವರದಿಯಾಗಿರುವ ಪ್ರಕರಣಗಳು ದಾಖಲಾಗಿರುವ ಕಾರಣ ಕಲಬುರಗಿಯಲ್ಲಿ ಸಾರ್ವಜನಿಕವಾಗಿ ವಿವಾಹ ಮಾಡುವುದಕ್ಕೆ ತಾತ್ಕಾಲಿಕವಾಗಿ ನಿರ್ಬಂಧ ಹೇರಲಾಗಿದೆ.

ಈ ಕುರಿತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದ್ದು, ಜಿಲ್ಲಾಡಳಿತ ಆದೇಶ ನೀಡಿದೆ. ಲಾಕ್‌ಡೌನ್‌ ವಿನಾಯತಿ ಬಳಿಕ ದೇವಸ್ಥಾನದಲ್ಲಿ, ಮನೆ ಮುಂದೆ ಹಾಗೂ ಸಮುದಾಯ ಭವನದಲ್ಲಿ ಮದುವೆ ಮಾಡಲಾಗುತ್ತಿದೆ. ಇನ್ಮುಂದೆ ಕಲಬುರಗಿಯಲ್ಲಿ ಇಂತಹ ಮದುವೆಗೆ ಅನುಮತಿ ಇಲ್ಲ.

ಮದುವೆ ಮಾಡುವವರು ಪರ್ಯಾಯವಾಗಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ವಿವಾಹ ಜರುಗಿಸಬಹುದು. ಅಲ್ಲಿ ಕೇವಲ ಐದು ಮಂದಿ ಮಾತ್ರ ಭಾಗವಹಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಅಂದ್ಹಾಗೆ, ಇದು ಕೇವಲ ಕಲಬುರಗಿ ಜಿಲ್ಲೆಗೆ ಮಾತ್ರವಲ್ಲ ಬಾಗಲಕೋಟೆಗೂ ಅನ್ವಯಿಸಿದೆ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಪತ್ರದಲ್ಲಿ ತಿಳಿಸಿದ್ದಾರೆ. ಈ ಹಿಂದೆ ಮದುವೆ ಸಮಾರಂಭದಲ್ಲಿ ಕೇವಲ 50 ಜನ ಮಾತ್ರ ಭಾಗವಹಿಸಬೇಕು ಎಂದು ಸೂಚನೆ ನೀಡಲಾಗಿತ್ತು. ಆದರೆ, ಅದಕ್ಕಿಂತ ಹೆಚ್ಚು ಜನರು ಮದುವೆಯಲ್ಲಿ ಪಾಲ್ಗೊಳ್ಳುವುದು ಹಲವು ಕಡೆ ವರದಿಯಾಗಿದೆ.

TRENDING