ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಾಣಕ್ಕೆ ಚಾಲನೆ

ಕಲಬುರಗಿ : ಅಫಜಲಪುರ ತಾಲೂಕಿನ ಹಾವಳಗಾ ಗ್ರಾಮದಲ್ಲಿ ಸಾಂಸ್ಕೃತಿಕ ಭವನ ಕಟ್ಟಡಕ್ಕೆ ಶಾಸಕ ಎಂ.ವೈ.ಪಾಟೀಲ್ ಗುದ್ದಲಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು ಹಾವಳಗಾ ಗ್ರಾಮದಲ್ಲಿ ಸಾಂಸ್ಕೃತಿಕ ಚಟುವಟಿಕೆ ನಡೆಸಲು ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಸಂಸದರಾಗಿದ್ದಾಗ 10ಲಕ್ಷ ರುಪಾಯಿ ನೀಡಿದ್ದಾರೆ.ಇನ್ನೂ ಈ ಕಾಮಗಾರಿ ಪೂರ್ಣಗೊಳಿಸಲು ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಹಾವಳಗಾ ಮತ್ತು ಘತ್ತರಿಗಿ ಕೂಡು ರಸ್ತೆ ನಿರ್ಮಾಣಕ್ಕೆ ನಬಾರ್ಡ್ ಯೋಜನೆ ಅಡಿಯಲ್ಲಿ 2 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದ ಮೇಲೆ ಕಾಮಗಾರಿ ಪ್ರಾರಂಭವಾಗುವುದೆಂದ ಅವರು ಹಾವಳಗಾ ಗ್ರಾಮಕ್ಕೆ ಮೂಲ ಸೌಲಭ್ಯ ಒದಗಿಸಲು 40 ಲಕ್ಷ ಅನುದಾನ ನೀಡಲಾಗಿದೆ ಎಂದು ಹೇಳಿದರು.

ಕುಮಸಗಿ ಯಲ್ಲಾಲಿಂಗ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ಶಿವಕುಮಾರ್ ನಾಟೀಕಾರ, ಜಿ.ಪಂ ಉಪಾಧ್ಯಕ್ಷ ಶೋಭಾ ಸಿರಸಗಿ, ತಾ.ಪಂ ಅಧ್ಯಕ್ಷ ರುಕ್ಮಿಣಿ ಜಮಾದಾರ್, ವಿಠಲ್ ನಾಟೀಕಾರ್ ಸೇರಿದಂತೆ ಇತರರು ಇದ್ದರು.

Share Post

Leave a Reply

Your email address will not be published. Required fields are marked *

error: Content is protected !!