ನೀರು ಹರಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಸತ್ಯಾಗ್ರಹಕ್ಕೆ ಹೆಚ್ಚಿದ ಬೆಂಬಲ

ಇಂಡಿ : ತಾಂಬಾ ಗ್ರಾಮದ ಸಂಗನ ಬಸವೇಶ್ವರ ವೃತ್ತದಲ್ಲಿ ಗುತ್ತಿ ಬಸವ ಕಾಲುವೆಗೆ ನೀರು ಹರಿಸುವಂತೆ ಒತ್ತಾಯಿಸಿ ಹಮ್ಮಿಕೊಂಡಿರುವ ಸರದಿ ಸತ್ಯಾಗ್ರಹಕ್ಕೆ ಸುತ್ತಮುತ್ತಲಿನ ಹಳ್ಳಿಯ ರೈತರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಸತ್ಯಾಗ್ರಹ ಸ್ಥಳಕ್ಕೆ ಮಾಜಿ ಶಾಸಕ ರಮೇಶ ಭೂಸನೂರ ಆಗಮಿಸಿ ರೈತರೊಂದಿಗೆ ಚರ್ಚಿಸಿ ಅಧಿಕಾರಿಗಳಿಗೆ ಫೋನ್ ಮುಖಾಂತರ ಮಾತನಾಡಿ ಕಾಲುವೆಗೆ ನೀರು ಹರಿಸಲು ಏನೇ ತೊಂದರೆ ಇದ್ದರೆ ಕೂಡಲೇ ಪರಿಹರಿಸಿ ನೀರು ಬಿಡುಗಡೆ ಮಾಡಬೇಕು ಎಂದು ಸೂಚನೆ ನೀಡಿದರು.

ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುವುದರಿಂದ ಇದರ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ ಒತ್ತಾಯಿಸುತ್ತೇನೆ ಎಂದು ಹೇಳಿದರು.

ಅದರಂತೆ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ಶಂಭುಲಿಂಗ ಕಕ್ಕಳಮೇಲಿ ಅವರು ಸಹ ರೈತರೊಂದಿಗೆ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕಾಲುವೆಗೆ ನೀರು ಹರಿಸಬೇಕು ಒತ್ತಾಯಿಸಿದರು.

Share Post

Leave a Reply

Your email address will not be published. Required fields are marked *

error: Content is protected !!