ಕ್ರೂಷರ್ ಮತ್ತು ಕಾರ್ ನಡುವೆ ಡಿಕ್ಕಿ : ಓರ್ವ ಸಾವು, ನಾಲ್ವರಿಗೆ ಗಾಯ

ಅಪಘಾತದಲ್ಲಿ ನಜ್ಜುಗುಜ್ಜಾದ ಕ್ರೂಷರ್

ಚಳ್ಳಕೆರೆ : ಕ್ರೂಷರ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿ ಕಾರ್ ಚಾಲಕ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ತಾಲ್ಲೂಕಿನ ಸಾಣಿಕೆರೆ ಗ್ರಾಮ ಸಾಯಿ ಡಾಬಾದ ಬಳಿ ತಡರಾತ್ರಿ ನಡೆದಿದೆ.

ಹನುಮಂತಪ್ಪ(29) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಈತ ಲಿಂಗಸೂರು ತಾಲ್ಲೂಕಿ‌ನ ನರಕಲದಿಮ್ಮ ಗ್ರಾಮದವನೆಂದು ಗುರುತಿಸಲಾಗಿದೆ. ಗಾಯಗೊಂಡ ನಾಲ್ವರು ಸಹ ಅದೇ ಗ್ರಾಮದವರಾಗಿದ್ದು ಇವರನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದಲ್ಲಿ ನಜ್ಜುಗುಜ್ಜಾದ ಇಂಡಿಕಾ ಕಾರು

ಹಿರಿಯೂರಿನಿಂದ ಬಳ್ಳಾರಿ ಕಡೆಗೆ ಹೋಗುತ್ತಿದ್ದ ಕಾರ್ ಮತ್ತು ದೇವದುರ್ಗ ದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕ್ರೂಷರ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆ ಸಂಬಂಧ ಚಳ್ಳಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!