ನೆರೆ ಸಂತ್ರಸ್ತರ ಪರಿಹಾರಕ್ಕಾಗಿ 50 ಸಾವಿರ ಕೋಟಿ ಬಿಡುಗಡೆಗೆ ವಾಟಾಳ್ ಆಗ್ರಹ

ಹುಬ್ಬಳ್ಳಿ : ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಚೆನ್ನಮ್ಮ ವೃತ್ತದಲ್ಲಿ ಕನ್ನಡ ಪರ ಹೋರಾಟಗಾರರು ಸೇರಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್ ಉತ್ತರ ಕರ್ನಾಟಕದಲ್ಲಿ ನೆರೆ ಸಂತ್ರಸ್ತರ ಪಾಡು ತೀರಾ ಹದೆಗೆಟ್ಟು ಹೋಗಿದ್ದು ಅಲ್ಲಿನ ಜನರು ತಮ್ಮ ಆಸ್ತಿ ಪಾಸ್ತಿ ಕಳೆದುಕೊಂಡು ಬಿದಿಗೆ ಬಿದ್ದಿದ್ದಾರೆ ಎಂದು ಹೇಳಿದರು. ಇಂತಹ ಸಮಯದಲ್ಲಿ ಜನರ ಸಂಕಷ್ಟಕ್ಕೆ ನೆರವಾಗಬೇಕಾದ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದ್ದು ಸೂಕ್ತ ಪರಿಹಾರ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಬಿಟ್ಟು ಕೂಡಲೇ 50 ಸಾವಿರ ಕೋಟಿ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

Share Post

Leave a Reply

Your email address will not be published. Required fields are marked *

error: Content is protected !!