ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ : ಸ್ಥಿತಿಗತಿ ಪರಿಶೀಲನೆ

ಕೋಲಾರ : ಜಿಲ್ಲಾ ಆಸ್ಪತ್ರೆಗೆ ದಿಢೀರ್‌ ಬೇಟಿ ನೀಡಿದ ಮಾಜಿ‌ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಆಸ್ಪತ್ರೆಯ ಪ್ರಸ್ತುತ ಸ್ಥಿತಿಗತಿ ಬಗ್ಗೆ ಸ್ಥಾನಿಕ ವೈದ್ಯರಿಂದ‌ ಮಾಹಿತಿ ಪಡೆದರು.

ತಮ್ಮ‌ಅವಧಿಯಲ್ಲಿ ಸೂಪರ್ ಸ್ಪೀಡ್ ಸುಸಜ್ಜಿತ ಆಸ್ಪತ್ರೆ ನವೀಕರಣ ಹಾಗೂ ಮಕ್ಕಳ ಆಸ್ಪತ್ರೆ ಕಾಮಗಾರಿ ಬಗ್ಗೆ ಮಾಹಿತಿ ಪಡೆದುಕೊಂಡ ಅವರು ಶೀಘ್ರದಲ್ಲೇ ಕೋಟಿ ವೆಚ್ಚದ ಮಕ್ಕಳ ಆಸ್ಪತ್ರೆ ಲೋಕಾರ್ಪಣೆ ಗೊಳ್ಳಲಿದೆ ಎಂದರು.

ಅಲ್ಲದೆ ಬಯಲುಸೀಮೆ ಜಿಲ್ಲೆಗಳಿಗೆ ಎತ್ತಿನ ಹೊಳೆ ನೀರು ತರಲು ಭೂಸ್ವಾಧೀನ ಪ್ರಕ್ರಿಯೆಗೆ ಆಯಾ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಕೆಲಸ ಶುರು ಮಾಡಲು ಅಧಿಕಾರಿಗಳ ಜೊತೆ ಚರ್ಚಿಸಬೇಕಿದೆ ಎಂದು ತಿಳಿಸಿದರು. ಯರಗೊಳ್ ಡ್ಯಾಂ ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿ ಯಲ್ಲಿ ಪೂರ್ಣ ಗೊಳ್ಳಲಿದೆ.

ಇದೇ ವೇಳೆ ರಾಜ್ಯದಲ್ಲಿ ಪೋನ್ ಕದ್ದಾಲಿಕೆ‌ ಬಗ್ಗೆ ನಡೆಯುತ್ತಿರುವ ಚರ್ಚೆಯ ಕುರಿತು ಕೇಳಿದ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಲು ನಿರಾಕರಿಸಿದರು. ಜಿಲ್ಲೆಯ ಅಭಿವೃದ್ಧಿ ಕಡೆ ತಮ್ಮ‌ ಚಿತ್ತವಾಗಿದ್ದು ರಾಜಕೀಯದ ಬಗ್ಗೆ ತಲೆಕಡೆಸಿಕೊಳ್ಳಲ್ಲ ಎಂದು ಹೇಳಿದರು.

ಮಾಜಿ‌ ಸ್ಪೀಕರ್ ಭೇಟಿ‌ ವೇಳೆ ಕೋಲಾರ ಸಂಸದ ಮುನಿಸ್ವಾಮಿ, ಶಾಸಕ ಶ್ರೀನಿವಾಸಗೌಡ, ವಿಧಾನ ಪರಿಷತ್ ಸದಸ್ಯ ನಸೀರ್ ಆಹ್ಮದ್ ಸೇರಿದಂತೆ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆ ಮುಖಂಡರು ಹಾಜರಿದ್ದರು.

Share Post

Leave a Reply

Your email address will not be published. Required fields are marked *

error: Content is protected !!