ಕಂದಾಯ ಭವನ ಕಟ್ಟಡ ಕುಸಿದು ಗ್ರಾಮ ಲೆಕ್ಕಾಧಿಕಾರಿಗೆ ಗಾಯ

ಚನ್ನಗಿರಿ : ಪಟ್ಟಣದ ಕಂದಾಯ ಭವನ ಕುಸಿದು ಸ್ಥಳದಲ್ಲಿದ್ದ ಮಹಿಳಾ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಗಾಯಗೊಂಡ ಘಟನೆ ನಡೆದಿದೆ.

ಅಂಜುಂ(26) ಗಾಯಗೊಂಡ ಗ್ರಾಮ ಲೆಕ್ಕಾಧಿಕಾರಿ. ಇವರು ತಾಲೂಕಿನ ಗೊಪ್ಪೆನಹಳ್ಳಿ ಗ್ರಾಮದವರಾಗಿದ್ದಾರೆ. ಇವರನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಗೆ ರವಾನಿಸಲಾಗಿದೆ.

ದಾವಣಗೆರೆ ಜಿಲ್ಲೆಯ ಕಂದಾಯ ಭವನದ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಏಕಾಏಕಿ ಕಟ್ಟಡದ ಒಂದು ಭಾಗ ಕುಸಿದಿದೆ. ಈ ವೇಳೆ ಗ್ರಾಮ ಲೆಕ್ಕಾಧಿಕಾರಿ ಅಂಜುಂ ಅವರ ತಲೆಗೆ ಪೆಟ್ಟಾಗಿದ್ದು ಗಾಯಗೊಂಡ ಅಂಜುಂ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.

Share Post

Leave a Reply

Your email address will not be published. Required fields are marked *

error: Content is protected !!