ನೆರೆ ಸಂತ್ರಸ್ತರ ಪರಿಹಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ದೇಣಿಗೆ ಸಂಗ್ರಹ

ಕೋಲಾರ : ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಸಂತ್ರಸ್ತರಿಗೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶಾಸಕ ರಮೇಶ್ ಕುಮಾರ್ ಆಭಿಮಾನಿಗಳ ತಂಡ ದೇಣಿಗೆ ಸಂಗ್ರಹಿಸಿ ನೀಡಿದರು.

ಒಂದು ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿ ಜಿಲ್ಲಾಧಿಕಾರಿ ಜೆ. ಮಂಜುನಾಥ ಅವರ ಮೂಲಕ ತಲುಪಿಸಿದರು. ಸಂತ್ರಸ್ತರ ನೆರವಿಗಾಗಿ ಶ್ರೀನಿವಾಸಪುರ ತಾಲೂಕಿನ ಜನತೆಯಿಂದ ಸಂಗ್ರಹಿಸಿದ್ದ ಅಗತ್ಯ ವಸ್ತುಗಳನ್ನು ತಾಲೂಕಿನ ಯುವ ಕಾಂಗ್ರೆಸ್ ಕಾರ್ಯಕರ್ತರು ಉತ್ತರ ಕರ್ನಾಟಕ ನೆರೆ ಹಾವಳಿ ಪೀಡಿತ ಪ್ರದೇಶಗಳಿಗೆ ತೆರಳಿ ಸಂತ್ರಸ್ತರಿಗೆ ತಾವೇ ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ.

ದೇಣಿಗೆಯಲ್ಲಿ ಸಂಗ್ರಹಣೆಯಾದ ಹಣವನ್ನು ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಳುಹಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ದಿಂಬಾಲ ಅಶೋಕ ಹೇಳಿದರು.

Share Post

Leave a Reply

Your email address will not be published. Required fields are marked *

error: Content is protected !!