ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ : ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ

ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಬಂಧಿಸಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಒಕ್ಕಲಿಗರ ಸಮುದಾಯ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.

ಬೆಂಗಳೂರು : ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಬಂಧಿಸಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಒಕ್ಕಲಿಗರ ಸಮುದಾಯ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.

ಜಯನಗರದ ಅಶೋಕ್ ಪಿಲ್ಲರ್ ಬಳಿ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದು, ಬಸ್ ನ ಗಾಜು ಪುಡಿ ಪುಡಿಯಾಗಿದೆ.

ಸದ್ಯ ಪ್ರತಿಭಟನೆ ಮೆರವಣಿಗೆ ನ್ಯಾಷನಲ್ ಕಾಲೇಜಿನಿಂದ ಪ್ರೀಡಂ ಪಾರ್ಕ್ ನತ್ತ ಹೊರಟಿದ್ದು, ಕಾಂಗ್ರೆಸ್ ನ ಕಾರ್ಯಕರ್ತರು, ಕರವೇ ಕಾರ್ಯಕರ್ತರು, ಒಕ್ಕಲಿಗ ಸಮುದಾಯದ ಸಂಘಟನಗಳು ಮತ್ತುಉ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಸೇರಿದಂತೆ ಸುಮಾರು 35 ಸಾವಿರಕ್ಕೂಹೆಚ್ಚು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!