ಹುತಾತ್ಮ ಅರಣ್ಯ ಸಿಬ್ಬಂದಿ ಪರಿಹಾರ 30 ಲಕ್ಷಕ್ಕೆ ಏರಿಕೆ: ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ

ಕರ್ತವ್ಯದಲ್ಲಿದ್ದಾಗ ಹುತಾತ್ಮರಾಗುವ ಅರಣ್ಯ ಇಲಾಖೆ ಸಿಬ್ಬಂದಿ ಕುಟುಂಬಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 20 ಲಕ್ಷ ರೂ

ಬೆಂಗಳೂರು: ಕರ್ತವ್ಯದಲ್ಲಿದ್ದಾಗ ಹುತಾತ್ಮರಾಗುವ ಅರಣ್ಯ ಇಲಾಖೆ ಸಿಬ್ಬಂದಿ ಕುಟುಂಬಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 20 ಲಕ್ಷ ರೂ. ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ನಗರದ ಅರಣ್ಯ ಭವನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಅರಣ್ಯ ಸಿಬ್ಬಂದಿಗೆ ಗೌರವ ಸಲ್ಲಿಸಿ, ಮಾತನಾಡಿದ ಅವರು ರಾಜ್ಯದಲ್ಲಿ ಒಟ್ಟು ಭೌಗೋಳಿಕ ವಿಸ್ತೀರ್ಣದ ಶೇ. 22ರಷ್ಟು ಅರಣ್ಯ ಪ್ರದೇಶ ಇರುವುದು ನೆಮ್ಮದಿ ನೀಡುವ ವಿಚಾರ. ಇದಕ್ಕಾಗಿ ಹಗಲಿರುಳು ಶ್ರಮಿಸುವ ಅರಣ್ಯ ಸಿಬ್ಬಂದಿಯ ಕಾಯಕ ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅರಣ್ಯ ಇಲಾಖೆ ಸಿಬ್ಬಂದಿ ಕರ್ತವ್ಯದಲ್ಲಿರುವಾಗ ಮೃತಪಟ್ಟರೆ ನೀಡುವ ಪರಿಹಾರ ಮೊತ್ತವನ್ನು ಪೊಲೀಸ್ ಇಲಾಖೆಗೆ ಸರಿ ಸಮನಾಗಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಅಲ್ಲದೆ, ಹುತಾತ್ಮರ ಕುಟುಂಬಗಳ ಕ್ಷೇಮಾಭಿವೃದ್ಧಿಗೂ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

Share Post

Leave a Reply

Your email address will not be published. Required fields are marked *

error: Content is protected !!