‘ನನ್ನನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ’ :ಎಚ್.ಡಿ.ಕೆ ಟಾಂಗ್

‘ನಾನು ನನ್ನ ಜೀವನದಲ್ಲಿ ತಪ್ಪುಗಳಿಗೆ ಅವಕಾಶ ಕೊಟ್ಟಿಲ್ಲ ಹೀಗಾಗಿ ನನ್ನನ್ನ ಪ್ರಕರಣದಲ್ಲಿ ಸಿಲುಕಿಸಲು ಆಗಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನನ್ನು ಯಾರೂ ಏನು ಮಾಡಲು ಆಗೋದಿಲ್ಲ’ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಮನಗರ : ‘ನಾನು ನನ್ನ ಜೀವನದಲ್ಲಿ ತಪ್ಪುಗಳಿಗೆ ಅವಕಾಶ ಕೊಟ್ಟಿಲ್ಲ ಹೀಗಾಗಿ ನನ್ನನ್ನ ಪ್ರಕರಣದಲ್ಲಿ ಸಿಲುಕಿಸಲು ಆಗಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನನ್ನು ಯಾರೂ ಏನು ಮಾಡಲು ಆಗೋದಿಲ್ಲ’ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಮೂಲಕ ಎಚ್.ಡಿ.ಕೆ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ಕುರಿತು ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು. ಚನ್ನಪಟ್ಟಣದಲ್ಲಿನ ಕಾರ್ಯಕ್ರಮ ಈ ಮೊದಲೇ ನಿಗಧಿಯಾಗಿತ್ತು. ಹಾಗಾಗಿ ಬೆಂಗಳೂರಿನ ಪ್ರತಿಭಟನೆಗೆ ನನಗೆ ಆಹ್ವಾನವಿರಲಿಲ್ಲ. ಆದರೂ ಕೂಡ ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಸೂಚನೆ ನೀಡಿದ್ದೆ. ಅವರು ಭಾಗಿಯಾಗಿದ್ದಾರೆ. ನನಗೆ ಮೊದಲೇ ಆಹ್ವಾನ ನೀಡಿದ್ದರೆ ನಾನು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದುದಾಗಿ ಎಂದರು.

ಕಾರ್ಯಕ್ರಮದ ಜಾಹಿರಾತಿನಲ್ಲಿ ಮುಂದೆ ಕುಮಾರಸ್ವಾಮಿಯನ್ನು ಬಂಧಿಸುತ್ತಾರೆಂದು ತಮ್ಮ ಫೋಟೋ ಹಾಕಿದ್ದಾರಂತೆ. ಆದರೆ ಈ ಕುಮಾರಸ್ವಾಮಿಯನ್ನ ಯಾರು ಏನು ಮಾಡೋಕಾಗಲ್ಲ. ನನ್ನನ್ನ ಪ್ರಕರಣದಲ್ಲಿ ಸಿಲುಕಿಸಲು ಆಗಲ್ಲ ಎಂದು ತಿಳಿಸಿದರು…

Share Post

Leave a Reply

Your email address will not be published. Required fields are marked *

error: Content is protected !!