ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕಲಬುರಗಿ : ರಾಜ್ಯದಲ್ಲಿ ಆಗಿರುವ ಭೀಕರ ಪ್ರವಾಹ ಮತ್ತು ಬರಗಾಲಕ್ಕೆ ಕೇಂದ್ರ ಸರಕಾರ ಹಾಗೂ ರಾಜ್ಯ ಸರ್ಕಾರ ನೆರೆ ಪರಿಹಾರ ನಿಡುವುದುರಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಕಲಬುರಗಿ ಜಿಲ್ಲೆಯ ಶಹಬಾದ್ ಪಟ್ಟಣದಲ್ಲಿ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು.

ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಮಜೀದ್ ಚೌಕ್ ನಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಮೂಲಕ ಸಾಗಿದರು.

ರಾಜ್ಯದಲ್ಲಿ ಪ್ರಕೃತಿ ವಿಕೋಪದಿಂದ ಭೀಕರ ಪ್ರವಾಹಕ್ಕೆ ಜನ ತುತ್ತಾಗಿದ್ದರು ಕೇಂದ್ರ ಸರಕಾರ ನಿದ್ದೆಗೆ ಜಾರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Share Post

Leave a Reply

Your email address will not be published. Required fields are marked *

error: Content is protected !!