ರಾಜ್ಯ ಸರ್ಕಾರದಿಂದ ಕಾಶ್ಮೀರದಲ್ಲಿ ಐಷಾರಾಮಿ ಹೋಟೆಲ್ ನಿರ್ಮಾಣಕ್ಕೆ ತಯಾರಿ

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ 370ನೇ ಕಲಂ ಕೇಂದ್ರ ಸರ್ಕಾರ ರದ್ದು ಪಡಿಸಿದ ನಂತ್ರ, ಜಮ್ಮು-ಕಾಶ್ಮೀರದಲ್ಲಿ ಜಾಗ ಕೊಳ್ಳಲು ಅನೇಕ ರಾಜ್ಯಗಳು ಉತ್ಸುಕವಾಗಿವೆ. ಇಂತಹ ಸಾಲಿನಲ್ಲಿ ಕರ್ನಾಟಕ ರಾಜ್ಯ ಕೂಡ ಇದೀಗ ಎಂಟ್ರಿಕೊಡುವ ಹಂತಕ್ಕೆ ತಲುಪಿದೆ.

ಬೆಂಗಳೂರು : ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ 370ನೇ ಕಲಂ ಕೇಂದ್ರ ಸರ್ಕಾರ ರದ್ದು ಪಡಿಸಿದ ನಂತ್ರ, ಜಮ್ಮು-ಕಾಶ್ಮೀರದಲ್ಲಿ ಜಾಗ ಕೊಳ್ಳಲು ಅನೇಕ ರಾಜ್ಯಗಳು ಉತ್ಸುಕವಾಗಿವೆ. ಇಂತಹ ಸಾಲಿನಲ್ಲಿ ಕರ್ನಾಟಕ ರಾಜ್ಯ ಕೂಡ ಇದೀಗ ಎಂಟ್ರಿಕೊಡುವ ಹಂತಕ್ಕೆ ತಲುಪಿದೆ. ರಾಜ್ಯ ಸರ್ಕಾರದಿಂದ ಕಾಶ್ಮೀರದಲ್ಲಿ ಐಷಾರಾಮಿ ಹೋಟೆಲ್ ನಿರ್ಮಾಣಕ್ಕೆ ಮುಂದಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, 370ನೇ ವಿಧಿ ರದ್ದಾಗಿದ್ದರಿಂದ ರಾಜ್ಯ ಸರ್ಕಾರ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕಾಶ್ಮೀರದಲ್ಲಿ ಐಷಾರಾಮಿ ಹೋಟೆಲ್ ನಿರ್ಮಾಣಕ್ಕೆ ತಯಾರಿ ನಡೆಸಿದೆ. ಇದಕ್ಕಾಗಿ ಜಾಗ ಕೂಡ ಖರೀದಿಸಲು ಮುಂದಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಕಾಶ್ಮೀರದಲ್ಲಿ ಜಾಗ ಖರೀದಿಸಿ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಐಷಾರಾಮಿ ಹೋಟೆಲ್ ನಿರ್ಮಾಣ ಮಾಡಲಾಗುತ್ತದೆ. ಇದಕ್ಕಾಗಿ ಜಾಗ ಖರೀದಿಸುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ, ಆನಂತ್ರ ಜಮ್ಮು-ಕಾಶ್ಮೀರ ರಾಜ್ಯಪಾಲರಿಗೂ ಮನವಿ ಮಾಡಿಕೊಳ್ಳಲಾಗುತ್ತದೆ. ಇಂತಹ ಜಾಗದಲ್ಲಿ ಐಷಾರಾಮಿ ಹೋಟೆಲ್ ಕಟ್ಟಿ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಶ್ರಮಿಸಲಾಗುತ್ತದೆ ಎಂದು ಹೇಳಿದರು.

ಅಂದಹಾಗೇ, ಕಾಶ್ಮೀರದಲ್ಲಿ ಐಷಾರಾಮಿ ಹೋಟೆಲ್ ನಿರ್ಮಾಣ ಮಾಡಿದ ನಂತ್ರ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ)ಕ್ಕೆ ಹಸ್ತಾಂತರಿಸಲಾಗುತ್ತದೆ. ಕೆಎಸ್ ಟಿಡಿಸಿ ನೇತೃತ್ವದಲ್ಲಿ ಹೋಟೆಲ್ ಮುನ್ನೆಡಿಸಿಕೊಂಡು ಹೋಗುವ ಚಿಂತನೆಯನ್ನು ರಾಜ್ಯ ಸರ್ಕಾರ ಮಾಡಿದೆ. ಈ ಮೂಲಕ ರಾಜ್ಯದಿಂದ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳುವ ಪ್ರವಾಸಿಗರಿಗೇ ಕರ್ನಾಟಕದ ಸವಿರುಚಿಯ ಹೋಟೆಲ್ ಊಟ ಸದ್ಯದಲ್ಲೇ ಸಿಗಲಿದೆ ಎಂಬ ಖುಷಿಯ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ.

Share Post

Leave a Reply

Your email address will not be published. Required fields are marked *

error: Content is protected !!