ಅಧಿಕಾರಿಗಳಿಂದ ನಕಲಿ ಜಾತಿ ಪ್ರಮಾಣಪತ್ರ : ಕ್ರಮಕ್ಕೆ ಆಗ್ರಹ

ಕಲಬುರಗಿ : ಕರ್ನಾಟಕ ರಾಜ್ಯದಲ್ಲಿ ವೀರಶೈವ-ಲಿಂಗಾಯತ ಸ್ವಾಮಿಗಳಿಗೆ ಬೇಡ ಜಂಗಮ ನಕಲಿ ಪ್ರಮಾಣ ಪತ್ರ ಕೊಡುತ್ತಿರುವ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ದಲಿತ ಮುಖಂಡ ಗುರುಶಾಂತ ಪಟ್ಟೇದಾರ ಆಗ್ರಹಿಸಿದರು.

ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಕಲಿ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

ಬೇಡ ಜಂಗಮ ಪ್ರಮಾಣ ಪತ್ರ ಪಡೆದು ಮೀಸಲಾತಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕೂಡಲೇ ನಕಲಿ ಜಾತಿ ಪ್ರಮಾಣ ಪತ್ರ ನೀಡುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

Share Post

Leave a Reply

Your email address will not be published. Required fields are marked *

error: Content is protected !!