ಮಾಧ್ಯಮ ನಿರ್ಬಂಧ ಖಂಡಿಸಿ ಪತ್ರಕರ್ತರ ಸಂಘದಿಂದ ಪ್ರತಿಭಟನೆ

ಕಲಬುರಗಿ : ವಿಧಾನ ಮಂಡಲ ಅಧಿವೇಷನದಲ್ಲಿ ವಿದ್ಯುನ್ಮಾನ ಮಾಧ್ಯಮಗಳಿಗೆ ನಿರ್ಬಂಧ ವಿಚಾರವಾಗಿ ಸ್ಪೀಕರ್ ನಿರ್ಧಾರ ಖಂಡಿಸಿ ಕಲಬುರಗಿಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.

ಜಿಲ್ಲಾಧಿಕಾರಿ ಕಛೇರಿ ಎದುರು ಪತ್ರಕರ್ತರು ಪ್ರತಿಭಟನೆ ಮಾಡಿ ಸ್ಪೀಕರ್ ವಿುರುದ್ಧ ಘೋಷಣೆ ಕೂಗಿದರು.

ಮಾಧ್ಯಮಗಳನ್ನು ಹತ್ತಿಕ್ಕುವ ಕಾರ್ಯ ಕೈಬಿಡಬೇಕು. ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ಈ ಕೂಡಲೆ ಕೈಬಿಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿವಿಧ ದೃಶ್ಯ ಮಾಧ್ಯಮಗಳು ಮತ್ತು ವಿವಿಧ ಪತ್ರಿಕೆಗಳ ವರದಿಗಾರರು ಹಾಗೂ ಛಾಯಾಗ್ರಾಹಕರು ಭಾಗಿಯಾಗಿದ್ದರು.

Share Post

Leave a Reply

Your email address will not be published. Required fields are marked *

error: Content is protected !!