ಸಿಂದಗಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ

ಸಿಂದಗಿ : ಪಟ್ಟಣದ ದರ್ಬಾರ್ ಶಾಲಾ ಆವರಣದಲ್ಲಿ ಕಾಂಗ್ರೆಸ್ ಬೃಹತ್ ಕಾರ್ಯಕರ್ತರ ಸಮಾವೇಶ ಹಾಗೂ ನೂತನ ಜಿಲ್ಲಾಧ್ಯಕ್ಷ ರಾಜು ಅಲಗೂರು ಅವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಹಾಗೂ ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ರಾಜ್ಯದ ಹಲವಾರು ಮುಖಂಡರು ಸಮಾವೇಶದಲ್ಲಿ ಭಾಗವಹಿಸಿಸಲಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಜೊತೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಕಾರ್ಯಕರ್ತರಿಗೆ ತಿಳಿಸಲು ಹಾಗೂ ಹೊಸ ಮುಖಗಳನ್ನು ಗುರುತಿಸಿ ಪಕ್ಷದ ಸಂಘಟನೆಗೆ ಬಳಸಿಕೊಳ್ಳಲು ಪಕ್ಷ ನಿರ್ಧರಿಸಿದೆ ಎಂದು ಹೇಳಿದರು.

ಸಿಂದಗಿ ಮತಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮಾಡುತ್ತೇವೆ. ಸಿಂದಗಿ ತಾಲ್ಲೂಕಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತದೆ ಹಾಗೂ ನಮ್ಮ ಕಾರ್ಯಕರ್ತರು ಸ್ಪರ್ಧೆಗೆ ತಯಾರಾಗಿರಿ ಎಂದು ಕರೆ ನೀಡಿದರು.

ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ ನಾವೆಲ್ಲರೂ ಭಾಗವಹಿಸಿ ಪಕ್ಷ ಸಂಘಟನೆ ಬಲಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Share Post

Leave a Reply

Your email address will not be published. Required fields are marked *

error: Content is protected !!