ಪೌರಕಾರ್ಮಿಕರಿಗೆ ಸುರಕ್ಷತಾ ಸಾಧನಗಳ ವಿತರಣೆ

ಕೋಲಾರ : ದಿನನಿತ್ಯವೂ ನಗರದ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಪೌರಕಾರ್ಮಿಕರಿಗೆ ನಗರಸಭೆಯ ನೂತನ ಆಯುಕ್ತ ಶ್ರೀಕಾಂತ್ ಸುರಕ್ಷತಾ ಸಾಧನಗಳನ್ನು ವಿತರಿಸಿದರು.

ನಗರದ ನಗರಸಭೆ ಮುಂಬಾಗ ಇಂದು ಬೆಳಗ್ಗೆ ಪೌರಕಾರ್ಮಿಕರ ಆರೋಗ್ಯ ಹಿತದೃಷ್ಟಿಯಿಂದ ಒಟ್ಟು 194 ಮಂದಿ ಪೌರಕಾರ್ಮಿಕರಿಗೆ ಜಾಕೇಟ್, ಹ್ಯಾಂಡ್ ಗ್ಲೌಸ್, ಮಾಸ್ಕ್‌ಗಳನ್ನು ವಿತರಿಸಿ ಪ್ರತಿನಿತ್ಯವೂ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವಾಗ ತಮ್ಮ ಸುರಕ್ಷತೆಗಾಗಿ ಇವುಗಳನ್ನು ಬಳಸಿಕೊಳ್ಳಬೇಕು ಎಂದರು.

ನಗರದ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಕೊಳ್ಳುವ ಪೌರಕಾರ್ಮಿಕರೊಂದಿಗೆ ಸಾರ್ವಜನಿಕರು ಸಂಯಮದಿಂದ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಇದರಿಂದ ನಗರದ ಸ್ವಚ್ಚತೆಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ಹೇಳಿದರು.

Share Post

Leave a Reply

Your email address will not be published. Required fields are marked *

error: Content is protected !!